Namma Metro|‌ ಮೇ 31ರಂದು ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ: ಬಿಎಂಆರ್‌ಸಿಎಲ್ ಪ್ರಕಟಣೆ
x

ನಮ್ಮ ಮೆಟ್ರೋ ನೇರಳೆ ಮಾರ್ಗ

Namma Metro|‌ ಮೇ 31ರಂದು ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ: ಬಿಎಂಆರ್‌ಸಿಎಲ್ ಪ್ರಕಟಣೆ

ಮೇ 31ರ ಭಾನುವಾರ ಬೆಳಗ್ಗೆ 7ರಿಂದ 9ರವರೆಗೆ ತುರ್ತು ಕಾಮಗಾರಿ ಹಿನ್ನೆಲೆ ನಮ್ಮ ಮೆಟ್ರೋ ನೇರಳೆ ಮಾರ್ಗದ ದೀಪಾಂಜಲಿನಗರ-ಮೆಜೆಸ್ಟಿಕ್ ನಡುವೆ ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ.


Click the Play button to hear this message in audio format

ಮುಂಬರುವ ಭಾನುವಾರದಂದು ( ಮೇ 31) ನೇರಳೆ ಮಾರ್ಗದ ಪ್ರಮುಖ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸಂಚಾರದಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಬಿಎಂಆರ್‌ಸಿಎಲ್ ತಿಳಿಸಿದೆ.

ನೇರಳೆ ಮಾರ್ಗದಲ್ಲಿರುವ ಅತ್ತಿಗುಪ್ಪೆ ಮತ್ತು ವಿಜಯನಗರ ಮೆಟ್ರೋ ನಿಲ್ದಾಣಗಳ ನಡುವಿನ ಭಾಗದಲ್ಲಿ ಅತ್ಯಗತ್ಯ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಈ ಕಾಮಗಾರಿಗಳನ್ನು ಸುಗಮವಾಗಿ ಮತ್ತು ಸುರಕ್ಷಿತವಾಗಿ ನಿರ್ವಹಿಸುವ ಉದ್ದೇಶದಿಂದ ರೈಲು ಸಂಚಾರದ ವೇಳಾಪಟ್ಟಿಯಲ್ಲಿ ಈ ಮಹತ್ವದ ಬದಲಾವಣೆ ಮಾಡಲಾಗಿದೆ ಎಂದು ಹೇಳಿದೆ.

ಮೇ 31ರಂದು ನೇರಳೆ ಮಾರ್ಗದ ದೀಪಾಂಜಲಿನಗರ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಂದರೆ ಕೆಎಸ್‌ಆರ್ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣಗಳ ನಡುವೆ ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಮೆಟ್ರೋ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುತ್ತದೆ. ಬೆಳಿಗ್ಗೆ 9 ಗಂಟೆಯ ನಂತರ ಇಡೀ ನೇರಳೆ ಮಾರ್ಗದಲ್ಲಿ ಎಂದಿನಂತೆ ಸಾಮಾನ್ಯ ಸೇವೆಗಳು ಪುನರಾರಂಭಗೊಳ್ಳಲಿವೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಬೆಳಿಗ್ಗೆ 7 ರಿಂದ 9 ಗಂಟೆಯವರೆಗಿನ ತಾತ್ಕಾಲಿಕ ವ್ಯತ್ಯಯದ ಅವಧಿಯಲ್ಲಿ ಚಲ್ಲಘಟ್ಟದಿಂದ ಮೈಸೂರು ರಸ್ತೆವರೆಗೆ ಹಾಗೂ ಕೆಂಪೇಗೌಡ ಮೆಜೆಸ್ಟಿಕ್‌ನಿಂದ ವೈಟ್‌ಫೀಲ್ಡ್ ಕಾಡುಗೋಡಿವರೆಗಿನ ಮಾರ್ಗಗಳಲ್ಲಿ ನಿಗದಿಪಡಿಸಿದ ವೇಳಾಪಟ್ಟಿಯಂತೆ ಮೆಟ್ರೋ ರೈಲುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಇದರೊಂದಿಗೆ ಹಸಿರು ಮಾರ್ಗದ ಮಾದಾವರದಿಂದ ಸಿಲ್ಕ್ ಇನ್‌ಸ್ಟಿಟ್ಯೂಟ್ ಹಾಗೂ ಹಳದಿ ಮಾರ್ಗದ ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರ ನಡುವಿನ ಸಂಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಭಾನುವಾರ ಬೆಳಿಗ್ಗೆ ಪ್ರಯಾಣಿಸುವ ನಾಗರಿಕರು ಈ ತಾತ್ಕಾಲಿಕ ಸೇವಾ ವ್ಯತ್ಯಯವನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪ್ರಯಾಣವನ್ನು ಯೋಜಿಸಿಕೊಳ್ಳುವಂತೆ ಬಿಎಂಆರ್‌ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ವಿನಂತಿಸಿದ್ದು, ಉಂಟಾಗುವ ಅನಾನುಕೂಲತೆಗೆ ಸಂಸ್ಥೆಯು ವಿಷಾದ ವ್ಯಕ್ತಪಡಿಸಿದೆ.

Read More
Next Story