ಹೊಸ ಬ್ಯಾರಕ್‌ಗೆ ಪವಿತ್ರಾ ಗೌಡ ಶಿಫ್ಟ್‌; ಇಂದು ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ಭವಿಷ್ಯ ನಿರ್ಧಾರ
x

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಅವರನ್ನು ಪರಪ್ಪನ ಅಗ್ರಹಾರ ಜೈಲಿನ ಐವರು ಸಜಾಬಂಧಿಗಳಿರುವ ಹೊಸ ಬ್ಯಾರಕ್‌ಗೆ ಸ್ಥಳಾಂತರಿಸಲಾಗಿದೆ.

ಹೊಸ ಬ್ಯಾರಕ್‌ಗೆ ಪವಿತ್ರಾ ಗೌಡ ಶಿಫ್ಟ್‌; ಇಂದು ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ಭವಿಷ್ಯ ನಿರ್ಧಾರ

ಹಲವು ಕೈದಿಗಳೊಂದಿಗೆ ಒಂದೇ ಶೌಚಾಲಯ ಬಳಸಬೇಕಾಗಿರುವುದು ಸೇರಿದಂತೆ ಬ್ಯಾರಕ್‌ನಲ್ಲಿನ ಕೆಲವು ಸಮಸ್ಯೆಗಳ ಬಗ್ಗೆ ಪವಿತ್ರಾ ಗೌಡ ಆಕ್ಷೇಪ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೇ ಕೋರ್ಟ್‌ ಮೆಟ್ಟಿಲೇರಿದ್ದರು.


Click the Play button to hear this message in audio format

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹೊಸ ಬ್ಯಾರಕ್‌ಗೆ ಸ್ಥಳಾಂತರಿಸಲಾಗಿದೆ. ಜೈಲು ಅಧಿಕಾರಿಗಳು ನ್ಯಾಯಾಲಯದ ಸೂಚನೆಯಂತೆ ಈ ಕ್ರಮ ಕೈಗೊಂಡಿದ್ದಾರೆ.

ಪವಿತ್ರಾ ಗೌಡ ಅವರನ್ನು ಇದೀಗ ಐವರು ಕೈದಿಗಳು ಇರುವ ಬ್ಯಾರಕ್‌ನಲ್ಲಿ ಇರಿಸಲಾಗಿದೆ. ಈ ಹಿಂದೆ ಅವರು ಹಲವು ಕೈದಿಗಳಿದ್ದ ಬ್ಯಾರಕ್‌ನಲ್ಲಿದ್ದರು. ಜೈಲಿನ ಮತ್ತೊಂದು ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆಯಾದ ಹಿನ್ನೆಲೆಯಲ್ಲಿ ಭದ್ರತೆ ಹಾಗೂ ಜೈಲು ನಿಯಮಗಳ ದೃಷ್ಟಿಯಿಂದ ಅವರನ್ನು ಪ್ರತ್ಯೇಕ ವ್ಯವಸ್ಥೆಯಲ್ಲಿ ಇರಿಸಲಾಗಿತ್ತು ಎಂದು ವರದಿ ತಿಳಿಸಿದೆ.

ಹೊಸ ಬ್ಯಾರಕ್‌ನಲ್ಲಿ ಇತರ ಕೈದಿಗಳೊಂದಿಗೆ ಪವಿತ್ರಾ ಗೌಡ ಇರಲಿದ್ದು, ಅಲ್ಲಿನ ಸೌಲಭ್ಯ ಮತ್ತು ಸ್ವಚ್ಛತೆ ವಿಚಾರವೂ ಚರ್ಚೆಗೆ ಬಂದಿದೆ. ಈ ಹಿಂದೆ ತಮಗೆ ಸೂಕ್ತ ಸೌಲಭ್ಯಗಳಿಲ್ಲದ ಬ್ಯಾರಕ್‌ನಲ್ಲಿ ಇರಿಸಲಾಗಿದೆ ಎಂದು ಆಕ್ಷೇಪಿಸಿ ಪವಿತ್ರಾ ಗೌಡ ನ್ಯಾಯಾಲಯದ ಮೊರೆ ಹೋಗಿದ್ದರು. ಬ್ಯಾರಕ್‌ನಲ್ಲಿ ಸ್ವಚ್ಛತೆ ಹಾಗೂ ಮೂಲ ಸೌಲಭ್ಯಗಳ ಸಮಸ್ಯೆಗಳಿವೆ ಎಂದು ಅರ್ಜಿಯಲ್ಲಿ ತಿಳಿಸಲಾಗಿತ್ತು.

ಸೌಲಭ್ಯವಿರುವ ಬ್ಯಾರಕ್‌ಗೆ ಸ್ಥಳಾಂತರಿಸುವಂತೆ ಕೋರ್ಟ್ ಸೂಚನೆ

ಪವಿತ್ರಾ ಗೌಡ ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಿದ ನ್ಯಾಯಾಲಯ, ಅವರಿಗೆ ಸೂಕ್ತ ಸೌಲಭ್ಯಗಳಿರುವ ಬ್ಯಾರಕ್‌ನಲ್ಲಿ ವ್ಯವಸ್ಥೆ ಮಾಡುವಂತೆ ಜೈಲು ಅಧಿಕಾರಿಗಳಿಗೆ ಸೂಚಿಸಿತ್ತು. ಇದರ ಆಧಾರದ ಮೇಲೆ ಜೈಲು ಮ್ಯಾನ್ಯುವಲ್‌ ಪ್ರಕಾರ ಇದೀಗ ಐವರು ಸಜಾಬಂಧಿಗಳು ಇರುವ ಬ್ಯಾರಕ್‌ಗೆ ಅವರನ್ನು ಸ್ಥಳಾಂತರಿಸಲಾಗಿದೆ.

ಇಂದು ಜಾಮೀನು ಅರ್ಜಿ ವಿಚಾರಣೆ

ಇದರ ನಡುವೆ ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ಸೋಮವಾರ ವಿಚಾರಣೆಗೆ ಬರಲಿದೆ. ಬೆಂಗಳೂರಿನ ಸಿಸಿಎಚ್‌-59 ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಸುಪ್ರೀಂ ಕೋರ್ಟ್‌ ಆದೇಶದ ಬಳಿಕ ಪವಿತ್ರಾ ಗೌಡ ಜಾಮೀನಿಗಾಗಿ ಸಲ್ಲಿಸಿರುವ ಮೊದಲ ಅರ್ಜಿ ಇದಾಗಿದೆ ಎಂದು ವರದಿ ತಿಳಿಸಿದೆ. ಅವರೊಂದಿಗೆ ಪ್ರಕರಣದ ಇನ್ನಿಬ್ಬರು ಆರೋಪಿಗಳ ಜಾಮೀನು ಅರ್ಜಿಗಳೂ ವಿಚಾರಣೆಗೆ ಬರಲಿವೆ.

Read More
Next Story