DKSH remains in Delhi: Troubleshooter surrenders to silence following high commands instructions!
x

ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್‌

ದೆಹಲಿಯಲ್ಲೇ ಉಳಿದ ಡಿಕೆಶಿ: ಹೈಕಮಾಂಡ್ ಸೂಚನೆ ಬೆನ್ನಲ್ಲೇ 'ಮೌನ'ಕ್ಕೆ ಶರಣಾದ ಟ್ರಬಲ್‌ ಶೂಟರ್‌!

ಉಪಮುಖ್ಯಮಂತ್ರಿ ಸ್ಥಾನ ಮತ್ತು ಸಂಪುಟ ಪುನಾರಚನೆಯಲ್ಲಿ ಯಾರಿಗೆ ಯಾವ ಜವಾಬ್ದಾರಿ ನೀಡಬೇಕು ಎಂಬ ಪ್ರಮುಖ ವಿಚಾರಗಳ ಕುರಿತು ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆಸಲು ಡಿ.ಕೆ. ಶಿವಕುಮಾರ್‌ ದೆಹಲಿಯಲ್ಲೇ ಉಳಿದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.


Click the Play button to hear this message in audio format

ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಬೆನ್ನಲ್ಲೇ, ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸದ್ಯ ದೆಹಲಿಯಲ್ಲೇ ಬೀಡುಬಿಟ್ಟಿರುವುದು ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.

ಪೂರ್ವ ನಿಗದಿತ ವೇಳಾಪಟ್ಟಿಯ ಪ್ರಕಾರ ಡಿ.ಕೆ.ಶಿವಕುಮಾರ್ ಬುಧವಾರ ಬೆಳಿಗ್ಗೆಯೇ ಬೆಂಗಳೂರಿಗೆ ಆಗಮಿಸಬೇಕಿತ್ತು. ಅಷ್ಟೇ ಅಲ್ಲದೆ, ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪ್ರಮುಖ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ, ಕೊನೆ ಕ್ಷಣದಲ್ಲಿ ತಮ್ಮ ದೆಹಲಿ ಪ್ರವಾಸವನ್ನು ವಿಸ್ತರಿಸಿರುವ ಡಿ.ಕೆ.ಶಿವಕುಮಾರ್‌, ಇಂದೂ ಕೂಡ ರಾಷ್ಟ್ರ ರಾಜಧಾನಿಯಲ್ಲೇ ವಾಸ್ತವ್ಯ ಹೂಡಿದ್ದಾರೆ.

ನಾಳೆ ಬೆಳಿಗ್ಗೆ ಬೆಂಗಳೂರಿಗೆ ಆಗಮನ

ನೂತನ ನಿರ್ಧಾರದಂತೆ ಡಿ.ಕೆ.ಶಿವಕುಮಾರ್ ಅವರು ಗುರುವಾರ ಬೆಳಿಗ್ಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ರಾಜಧಾನಿಗೆ ಬಂದಿಳಿಯುತ್ತಿದ್ದಂತೆ ಅವರು ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯೋಜಿಸಿರುವ ಮಹತ್ವದ 'ಬ್ರೇಕ್‌ಫಾಸ್ಟ್' ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

'ಡೆಪ್ಯುಟಿ ಸಿಎಂ' ಹುದ್ದೆಯ ತಂತ್ರಗಾರಿಕೆ?

ದೆಹಲಿಯಲ್ಲಿ ಬೀಡುಬಿಟ್ಟಿರುವ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಹೈಕಮಾಂಡ್ ನಾಯಕರ ಜೊತೆ ಸರಣಿ ಸಮಾಲೋಚನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ತಾವು ಮುಖ್ಯಮಂತ್ರಿಯಾದ ಬಳಿಕ ಸೃಷ್ಟಿಯಾಗಲಿರುವ ಉಪಮುಖ್ಯಮಂತ್ರಿ ಸ್ಥಾನ ಮತ್ತು ಸಂಪುಟ ಪುನಾರಚನೆಯಲ್ಲಿ ಯಾರಿಗೆ ಯಾವ ಜವಾಬ್ದಾರಿ ನೀಡಬೇಕು ಎಂಬ ಪ್ರಮುಖ ವಿಚಾರಗಳ ಕುರಿತು ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆಸಲು ಅವರು ದೆಹಲಿಯಲ್ಲೇ ಉಳಿದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಾಧ್ಯಮಗಳಿಗೆ ರಿಯಾಕ್ಷನ್ ಬೇಡ: ಹೈಕಮಾಂಡ್ ಸಲಹೆ!

ಕಾಂಗ್ರೆಸ್ ವರಿಷ್ಠರು ಡಿ.ಕೆ.ಶಿವಕುಮಾರ್ ಅವರಿಗೆ ರಾಜಕೀಯವಾಗಿ ಅತ್ಯಂತ ಜಾಗರೂಕ ನಡೆ ಇಡಲು ಸೂಚಿಸಿದ್ದಾರೆ ಎನ್ನಲಾಗಿದೆ. "ನೀವು ಅಧಿಕೃತವಾಗಿ ಮುಖ್ಯಮಂತ್ರಿ ಹುದ್ದೆ ಅಲಂಕರಿಸುವವರೆಗೂ ಮಾಧ್ಯಮಗಳಿಗೆ ಯಾವುದೇ ರೀತಿಯ ಹೇಳಿಕೆ ಅಥವಾ ಪ್ರತಿಕ್ರಿಯೆ ನೀಡಬೇಡಿ. ನಾಳೆಯವರೆಗೂ ದೆಹಲಿಯಲ್ಲೇ ಇದ್ದು, ನಂತರವಷ್ಟೇ ಬೆಂಗಳೂರಿಗೆ ತೆರಳಿ" ಎಂದು ಹೈಕಮಾಂಡ್ ನಾಯಕರು ಡಿಕೆಶಿಗೆ ಕಿವಿಮಾತು ಹೇಳಿದ್ದಾರೆ ಎನ್ನಲಾಗಿದೆ.

ವರಿಷ್ಠರ ಈ ಸೂಚನೆಯನ್ನು ಅಕ್ಷರಶಃ ಪಾಲಿಸುತ್ತಿರುವ ಡಿ.ಕೆ.ಶಿವಕುಮಾರ್ ಅವರು ನಿನ್ನೆಯಿಂದ ಇಂದಿನವರೆಗೂ ಮಾಧ್ಯಮಗಳ ಯಾವುದೇ ಪ್ರಶ್ನೆಗಳಿಗೂ ಉತ್ತರಿಸದೆ ಸಂಪೂರ್ಣ ಮೌನಕ್ಕೆ ಶರಣಾಗಿದ್ದಾರೆ. ಈ ಮೌನವೇ ಕರ್ನಾಟಕದ ಮುಂದಿನ ರಾಜಕೀಯ ಬದಲಾವಣೆಯ ದಿಕ್ಸೂಚಿಯಾಗಿದೆ.

Read More
Next Story