ಡಿಕೆಶಿ ಸಂಪುಟದ ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಯತೀಂದ್ರಾ ಹೆಸರು?
x

ಡಿಕೆಶಿ ಸಂಪುಟದ ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಯತೀಂದ್ರಾ ಹೆಸರು?

ಇಂದು ಡಿಕೆಶಿ ಜತೆ 10-12 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜಿ. ಪರಮೇಶ್ವರ್, ಎಂ.ಬಿ. ಪಾಟೀಲ್ ಸೇರಿ ಸಚಿವರಾಗಲಿರುವ ಸಂಭಾವ್ಯ ನಾಯಕರ ಕಂಪ್ಲೀಟ್ ಲಿಸ್ಟ್ ಇಲ್ಲಿದೆ.


ಕರ್ನಾಟಕ ರಾಜಕೀಯದ ಅತ್ಯಂತ ದೊಡ್ಡ ಕುತೂಹಲಕ್ಕೆ ಇಂದು ತೆರೆಬೀಳುವ ಕ್ಷಣ ಹತ್ತಿರ ಬಂದಿದೆ. ಇಂದು ಜೂನ್ 3 ರಂದು ಸಂಜೆ 4:05ಕ್ಕೆ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರ ಬೆನ್ನಲ್ಲೇ ಸಚಿವ ಸಂಪುಟದ ಮೊದಲ ಹಂತದ ವಿಸ್ತರಣೆಯೂ ನಡೆಯಲಿದ್ದು, ಯಾರೆಲ್ಲಾ ಸಚಿವರಾಗಲಿದ್ದಾರೆ ಎಂಬ ಸಂಭಾವ್ಯ ಪಟ್ಟಿ ಈಗ ಹೊರಬಿದ್ದಿದೆ.

ಮೊದಲ ಹಂತದಲ್ಲಿ ಹಳಬರಿಗೆ ಮಾತ್ರ ಮಣೆ: ಏನಿದು ಹೈಕಮಾಂಡ್ ಪ್ಲಾನ್?

ಮೂಲಗಳ ಪ್ರಕಾರ, ಮೊದಲ ಹಂತದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಜೊತೆಗೆ ಕೇವಲ 10 ರಿಂದ 12 ಶಾಸಕರು ಮಾತ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ದಟ್ಟವಾಗಿದೆ. ವಿಶೇಷವೆಂದರೆ, ಮೊದಲ ಪಟ್ಟಿಯಲ್ಲಿ ಸಿದ್ದರಾಮಯ್ಯ ಸಂಪುಟದಲ್ಲಿದ್ದ ಹಿರಿಯ ನಾಯಕರಿಗೆ ಮಾತ್ರ ಅವಕಾಶ ನೀಡಲು ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗಿದೆ.

ಮೊದಲ ಹಂತದಲ್ಲೇ ಹೊಸ ಶಾಸಕರಿಗೆ ಸಚಿವ ಸ್ಥಾನ ನೀಡಿದರೆ ಪಕ್ಷದೊಳಗೆ ತೀವ್ರ ಅಸಮಾಧಾನ ಮತ್ತು ಬಂಡಾಯ ಏಳುವ ಸಾಧ್ಯತೆ ಇರುವುದರಿಂದ, ಸದ್ಯಕ್ಕೆ ಹಿರಿಯರನ್ನು ಮಾತ್ರ ಸಚಿವರನ್ನಾಗಿ ಮಾಡಿ, ಎರಡನೇ ಹಂತದಲ್ಲಿ ಹೊಸಬರಿಗೆ ಅವಕಾಶ ನೀಡುವ 'ಸಮಾಧಾನ ಸೂತ್ರ'ವನ್ನು ಕಾಂಗ್ರೆಸ್ ವರಿಷ್ಠರು ಸಿದ್ಧಪಡಿಸಿದ್ದಾರೆ.

ಯತೀಂದ್ರ ಸಿದ್ದರಾಮಯ್ಯ ಹೆಸರಿನ ಸುತ್ತ ಭಾರೀ ಚರ್ಚೆ!

ಸದ್ಯ ಹರಿದಾಡುತ್ತಿರುವ ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೆಸರೂ ಮುಂಚೂಣಿಯಲ್ಲಿದೆ. ಆದರೆ, ಮೊದಲ ಹಂತದಲ್ಲೇ ಅವರಿಗೆ ಸಚಿವ ಸ್ಥಾನ ನೀಡಿದರೆ, ಪಕ್ಷದ ಇತರ ಹಿರಿಯ ಹಾಗೂ ನಿಷ್ಠಾವಂತ ಶಾಸಕರು ಅಸಮಾಧಾನಗೊಳ್ಳಬಹುದು ಎಂಬ ಆತಂಕವೂ ಇದೆ. ಹೀಗಾಗಿ ಯತೀಂದ್ರ ಅವರಿಗೆ ಸಚಿವ ಸ್ಥಾನ ನೀಡುವ ಕುರಿತ ಸಾಧಕ-ಬಾಧಕಗಳ ಬಗ್ಗೆ ದೆಹಲಿಯಲ್ಲಿ ವರಿಷ್ಠರ ಮಟ್ಟದಲ್ಲಿ ತಡರಾತ್ರಿಯವರೆಗೂ ಸುದೀರ್ಘ ಚರ್ಚೆಗಳು ನಡೆದಿವೆ ಎನ್ನಲಾಗಿದೆ.

ಇಂದು ಪ್ರಮಾಣ ವಚನ ಸ್ವೀಕರಿಸಲಿರುವ ಸಂಭಾವ್ಯ ಸಚಿವರ ಪಟ್ಟಿ:

ಇಂದು ರಾಜಭವನದಲ್ಲಿ ನಡೆಯಲಿರುವ ಅದ್ಧೂರಿ ಸಮಾರಂಭದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಪ್ರಮುಖ ನಾಯಕರ ಸಂಭಾವ್ಯ ಪಟ್ಟಿ ಇಲ್ಲಿದೆ.

ಇಂದು ಪ್ರಮಾಣವಚನ ಸ್ವೀಕರಿಸುವ ಸಂಭಾವ್ಯ ಸಚಿವರು

ಜಿ‌ ಪರಮೇಶ್ವರ್

ಕೆ.ಜೆ.ಜಾರ್ಜ್

ರಾಮಲಿಂಗಾರೆಡ್ಡಿ

ಎಂ.ಬಿ.ಪಾಟೀಲ್

ಸತೀಶ್ ಜಾರಕಿಹೊಳಿ

ಪ್ರಿಯಾಂಕ್ ಖರ್ಗೆ

ಕೃಷ್ಣಭೈರೇಗೌಡ

ಈಶ್ವರ್ ಖಂಡ್ರೆ

ಯತೀಂದ್ರ ಸಿದ್ದರಾಮಯ್ಯ

Read More
Next Story