Siddaramaiah clarifies that more grants were given to the Kuruba community and no discrimination was made against other castes.
x
ಸಿಎಂ ಸಿದ್ಧರಾಮಯ್ಯ(ಸಂಗ್ರಹ ಚಿತ್ರ)

Karnataka By Election| ಚುನಾವಣಾ ಅಬ್ಬರಕ್ಕೆ ನಾಳೆ ತೆರೆ: ದಾವಣಗೆರೆ, ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಚಾರ

CM Siddaramaiah| ಉಪ ಚುನಾವಣೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ನಾಳೆ ಸಂಜೆ ತೆರೆಬೀಳಲಿದೆ. ದಾವಣಗೆರೆ ಮತ್ತು ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ ಹಾಗೂ ಬಿ.ವೈ. ವಿಜಯೇಂದ್ರ ಬಿರುಸಿನ ಮತಯಾಚನೆ ನಡೆಸಲಿದ್ದಾರೆ.


ರಾಜ್ಯದ ಕುತೂಹಲ ಕೆರಳಿಸಿರುವ ಉಪ ಚುನಾವಣೆಯ ಬಹಿರಂಗ ಪ್ರಚಾರದ ಅಬ್ಬರಕ್ಕೆ ಮಂಗಳವಾರ ಸಂಜೆ ತೆರೆಬೀಳಲಿದೆ. ಕೊನೆಯ ಹಂತದ ಪ್ರಚಾರದಲ್ಲಿ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಸರ್ವ ಸನ್ನದ್ಧವಾಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಮಿಂಚಿನ ಸಂಚಾರ ನಡೆಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿಗಳ ಪರ ಅಂತಿಮ ಹಂತದ ಮತಬೇಟೆ ನಡೆಸಲಿದ್ದಾರೆ.

ಸಿಎಂ ಕಾರ್ಯಕ್ರಮದ ವಿವರ:

ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್‌ಎಎಲ್ (HAL) ವಿಮಾನ ನಿಲ್ದಾಣದಿಂದ ದಾವಣಗೆರೆಗೆ ಪ್ರಯಾಣ ಬೆಳೆಸಲಿರುವ ಸಿಎಂ, ಅಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಪರ ಮತ್ತೊಂದು ಸುತ್ತಿನ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ದಾವಣಗೆರೆಯಲ್ಲಿ ವಿವಿಧ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿರುವ ಅವರು, ಸಂಜೆಯ ವೇಳೆಗೆ ಬಾಗಲಕೋಟೆಯತ್ತ ಪ್ರಯಾಣ ಬೆಳೆಸಲಿದ್ದಾರೆ.

ರಾತ್ರಿ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರವಾಗಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಚಾರ ಮುಗಿದ ನಂತರ ಸಿಎಂ ಸಿದ್ದರಾಮಯ್ಯ ಅವರು ಬಾದಾಮಿಗೆ ತೆರಳಿ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ನಾಳೆ (ಮಂಗಳವಾರ) ಬೆಳಗ್ಗೆ ಅವರು ಮರಳಿ ಬೆಂಗಳೂರಿಗೆ ಆಗಮಿಸಲಿದ್ದಾರೆ.

ಬಿಜೆಪಿ ಪಾಳಯದಲ್ಲೂ ಭರ್ಜರಿ ಕಸರತ್ತು

ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ವಿರೋಧ ಪಕ್ಷಗಳ ನಾಯಕರು ಸಹ ಅಖಾಡದಲ್ಲಿ ಅಬ್ಬರಿಸಲಿದ್ದಾರೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಇಂದು ಇಡೀ ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಬೀಡುಬಿಟ್ಟು ಮತಬೇಟೆ ನಡೆಸಲಿದ್ದಾರೆ.

ದಾವಣಗೆರೆಯಲ್ಲಿ ಕಮಲ ಪಾಳಯ: ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ದಾವಣಗೆರೆಯಲ್ಲಿ ಇಂದು ಬಿಜೆಪಿ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ಕೈಗೊಳ್ಳಲಿದ್ದಾರೆ. ಒಟ್ಟಾರೆಯಾಗಿ, ಬಹಿರಂಗ ಪ್ರಚಾರಕ್ಕೆ ಅಂತ್ಯ ಹಾಡಲು ಇಂದು ಎರಡೂ ಪಕ್ಷಗಳ ಘಟಾನುಘಟಿ ನಾಯಕರು ಸಜ್ಜಾಗಿದ್ದು, ಮತದಾರರ ಮನ ಗೆಲ್ಲಲು ಕೊನೆಯ ಕ್ಷಣದ ಕಸರತ್ತು ನಡೆಸುತ್ತಿದ್ದಾರೆ.

Read More
Next Story