High command agrees to order: CM Siddaramaiah writes to Lok Bhavan seeking time to meet Governor!
x

ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಹಾಗೂ ಸಿಎಂ ಸಿದ್ದರಾಮಯ್ಯ

ಹೈಕಮಾಂಡ್ ಅದೇಶಕ್ಕೆ ಸಮ್ಮತಿ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿ ಲೋಕಭವನಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ!

ಗುರುವಾರ (ಮೇ 28) ಬೆಳಿಗ್ಗೆ 10.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.


Click the Play button to hear this message in audio format

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲ ಮೂಡಿಸಿದ್ದ ನಾಯಕತ್ವ ಬದಲಾವಣೆ ಪ್ರಕ್ರಿಯೆ ಇದೀಗ ಅಂತಿಮ ಘಟ್ಟಕ್ಕೆ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ (ಗುರುವಾರ) ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಲಿದ್ದಾರೆ ಎಂಬ ಮಾಹಿತಿ ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿದ್ದು, ಈ ಮೂಲಕ ಕರ್ನಾಟಕ ರಾಜಕೀಯದಲ್ಲಿ ದೊಡ್ಡ ಮಟ್ಟದ ಬದಲಾವಣೆಯೊಂದು ನಿಶ್ಚಿತವಾದಂತಾಗಿದೆ.

ರಾಜಭವನಕ್ಕೆ ಪತ್ರ ರವಾನೆ

ಗುರುವಾರ (ಮೇ 28) ಬೆಳಿಗ್ಗೆ 10.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ನಿಟ್ಟಿನಲ್ಲಿ ರಾಜ್ಯಪಾಲರ ಭೇಟಿಗೆ ಸಮಯ ಕೋರಿ ಮುಖ್ಯಮಂತ್ರಿಗಳ ಕಚೇರಿಯಿಂದ (CMO) ಈಗಾಗಲೇ ರಾಜಭವನಕ್ಕೆ ಅಧಿಕೃತ ಪತ್ರ ರವಾನೆಯಾಗಿದೆ. ರಾಜಭವನದಿಂದ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆಯೇ ಸಿದ್ದರಾಮಯ್ಯ ಅವರು ಲೋಕಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.

ರಾಜೀನಾಮೆಗೂ ಮುನ್ನ 'ಉಪಹಾರ ಕೂಟ'ದ ತಂತ್ರ

ರಾಜೀನಾಮೆ ನೀಡುವ ಮುನ್ನ ನಾಳೆ ಬೆಳಿಗ್ಗೆ 9 ಗಂಟೆಗೆ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಆಪ್ತ ಸಚಿವರು ಹಾಗೂ ಶಾಸಕರಿಗಾಗಿ ಹೈ-ಪ್ರೊಫೈಲ್ ಉಪಹಾರ ಕೂಟವನ್ನು ಆಯೋಜಿಸಿದ್ದಾರೆ. ಈ ಸಭೆಯಲ್ಲಿ ತಮ್ಮ ರಾಜೀನಾಮೆಗೆ ಕಾರಣ ಹಾಗೂ ಹೈಕಮಾಂಡ್ ನಿರ್ಧಾರದ ಬಗ್ಗೆ ಶಾಸಕರಿಗೆ ಮನವರಿಕೆ ಮಾಡಿಕೊಡಲಿದ್ದಾರೆ ಎನ್ನಲಾಗಿದೆ. ಇದಾದ ಬಳಿಕ ನೇರವಾಗಿ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಲಿದ್ದಾರೆ.

Read More
Next Story