
ಸತೀಶ್ ಜಾರಕಿಹೊಳಿ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಯು.ಟಿ. ಖಾದರ್ ಪ್ರತಿಕ್ರಿಯಿಸಿದ್ದಾರೆ.
ಸತೀಶ್ ಜಾರಕಿಹೊಳಿ ಮೇಲೆ ವಿಶ್ವಾಸವಿದೆ, ಕೇಸ್‌ನಿಂದ ಹೊರಬರುತ್ತಾರೆ: ಯು.ಟಿ. ಖಾದರ್
ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿ ಯಾಕೆ ರೇಡ್ ದಾಳಿ ಮಾಡಬೇಕು ಎಂದು ಪ್ರಶ್ನಿಸಿರುವ ಯು.ಟಿ. ಖಾದರ್, ಕಾಂಗ್ರೆಸ್ ನಾಯಕರು ಜನರ ಬೆಂಬಲದಿಂದ ಆಯ್ಕೆಯಾಗಿ ಬಂದವರು ಎಂದು ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಯು.ಟಿ. ಖಾದರ್ ಪ್ರತಿಕ್ರಿಯಿಸಿದ್ದಾರೆ. ಜಾರಕಿಹೊಳಿ ಅವರ ಮೇಲೆ ತಮಗೆ ವಿಶ್ವಾಸವಿದ್ದು, ಅವರು ಈ ಪ್ರಕರಣದಿಂದ ಹೊರಬರುತ್ತಾರೆ ಎಂಬ ನಂಬಿಕೆಯಿದೆ ಎಂದು ಹೇಳಿದ್ದಾರೆ. ಸೆಪ್ಟೆಂಬರ್ 9ರಂದು ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿರುವುದು ವರದಿಯಾಗಿದೆ.
‘ಜನ ಎಲ್ಲವನ್ನೂ ಅರ್ಥ ಮಾಡಿಕೊಳ್ಳುತ್ತಾರೆ’
ಕಾಂಗ್ರೆಸ್ ನಾಯಕರ ಮೇಲೆ ಯಾಕೆ ದಾಳಿ ಮಾಡಬೇಕು ಎಂದು ಪ್ರಶ್ನಿಸಿರುವ ಯು.ಟಿ. ಖಾದರ್, ಕಾಂಗ್ರೆಸ್ ನಾಯಕರು ಜನರ ಬೆಂಬಲದಿಂದ ಆಯ್ಕೆಯಾಗಿ ಬಂದವರು ಎಂದು ಹೇಳಿದ್ದಾರೆ. ಇಂತಹ ಬೆಳವಣಿಗೆಗಳ ಹಿಂದಿನ ವಿಚಾರಗಳನ್ನು ಜನರು ಅರ್ಥ ಮಾಡಿಕೊಳ್ಳುತ್ತಾರೆ ಎಂದಿದ್ದಾರೆ.
‘ಜಾರಕಿಹೊಳಿ ಮೇಲೆ ವಿಶ್ವಾಸವಿದೆ’
ಸತೀಶ್ ಜಾರಕಿಹೊಳಿ ಅವರು ತಪ್ಪು ರೀತಿಯಲ್ಲಿ ಯಾವುದೇ ವ್ಯವಹಾರ ನಡೆಸಿರಲಾರರು ಎಂಬ ವಿಶ್ವಾಸವಿದೆ ಎಂದು ಖಾದರ್ ಹೇಳಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದ್ದು, ಜಾರಕಿಹೊಳಿ ಅವರು ಈ ಕೇಸ್‌ನಿಂದ ಒಳ್ಳೆಯ ರೀತಿಯಲ್ಲಿ ಹೊರಬರುತ್ತಾರೆ ಎಂಬ ನಂಬಿಕೆಯಿದೆ ಎಂದು ತಿಳಿಸಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರಿನ ನಿವಾಸ ಸೇರಿದಂತೆ ರಾಜ್ಯ ಹಾಗೂ ಮಹಾರಾಷ್ಟ್ರದ ವಿವಿಧೆಡೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಬೆಳಗಾವಿ ಹಾಗೂ ಮಹಾರಾಷ್ಟ್ರ ಸೇರಿದಂತೆ ಸುಮಾರು 15 ಸ್ಥಳಗಳಲ್ಲಿ ಇ.ಡಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಅಬಕಾರಿ ಅಕ್ರಮ ಪ್ರಕರಣದ ಮುಂದುವರಿದ ತನಿಖೆ
ಈ ಹಿಂದೆ ಮಂಜುನಾಥ್ ಎಂಬವರಿಗೆ ಸಂಬಂಧಿಸಿದ ಅಬಕಾರಿ ಅಕ್ರಮ ಪ್ರಕರಣದ ತನಿಖೆ ವೇಳೆ ಇ.ಡಿ ಅಧಿಕಾರಿಗಳು ಶೋಧ ನಡೆಸಿದ್ದರು. ಇದೀಗ ಅದೇ ಪ್ರಕರಣದ ಮುಂದುವರಿದ ತನಿಖೆಯ ಭಾಗವಾಗಿ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲೂ ಶೋಧ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
18 ಬಾರ್‌ಗಳಿಗೆ ಲೈಸೆನ್ಸ್ ಕೊಡಿಸಲು ಪ್ರಭಾವ ಬಳಕೆ ಆರೋಪ
ಈ ದಾಳಿಯು ಮೂಲತಃ ಸತೀಶ್ ಜಾರಕಿಹೊಳಿ ಅವರ ಬಾಮೈದ ಮಂಜುನಾಥ್ ಅವರಿಗೆ ಸಂಬಂಧಿಸಿದ್ದು ಎನ್ನಲಾಗಿದೆ. ಮಂಜುನಾಥ್ ವಿರುದ್ಧ ಈ ಹಿಂದೆಯೂ ಅಬಕಾರಿ ಅಕ್ರಮಗಳಿಗೆ ಸಂಬಂಧಿಸಿದಂತೆ ಇ.ಡಿ ಶೋಧ ನಡೆಸಿತ್ತು. ಸತೀಶ್ ಜಾರಕಿಹೊಳಿ ಅವರು ಸಚಿವರಾಗಿದ್ದಾಗ ತಮ್ಮ ಪ್ರಭಾವ ಬಳಸಿ ನಿಯಮಬಾಹಿರವಾಗಿ ಬರೋಬ್ಬರಿ 18 ಬಾರ್‌ಗಳಿಗೆ ಅನಧಿಕೃತ ಲೈಸೆನ್ಸ್ ಕೊಡಿಸಲು ನೆರವಾಗಿದ್ದರು ಎಂಬ ಆರೋಪ ಕೇಳಿಬಂದಿದೆ.

