SIR ವೇಳೆ ಮತದಾರರ ಪಟ್ಟಿಯಿಂದ ನಟ ಪ್ರಕಾಶ್‌ ರಾಜ್‌ ಹೆಸರು ಡಿಲೀಟ್
x

ಕರ್ನಾಟಕದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡುವೆಯೇ ನಟ ಪ್ರಕಾಶ್ ರಾಜ್ ಅವರ ಹೆಸರು ಬೆಂಗಳೂರು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

SIR ವೇಳೆ ಮತದಾರರ ಪಟ್ಟಿಯಿಂದ ನಟ ಪ್ರಕಾಶ್‌ ರಾಜ್‌ ಹೆಸರು ಡಿಲೀಟ್

ತಮ್ಮ ಹೆಸರು ಮತದಾರರ ಪಟ್ಟಿಯಿಂದ ಹೇಗೆ ಕಾಣೆಯಾಗಿದೆ ಎಂಬುದನ್ನು ಪರಿಶೀಲಿಸಿ, ಮತ್ತೆ ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಲು ಯಾವ ಪ್ರಕ್ರಿಯೆ ಅನುಸರಿಸಬೇಕು ಎಂಬುದನ್ನು ನೋಡುತ್ತೇನೆ ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.


Click the Play button to hear this message in audio format

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡುವೆಯೇ ನಟ ಪ್ರಕಾಶ್ ರಾಜ್ ಅವರ ಹೆಸರು ಬೆಂಗಳೂರು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಕಾಣಿಸುತ್ತಿಲ್ಲ ಎಂದು ಪ್ರಕಾಶ್ ರಾಜ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಡಿಯೋದಲ್ಲಿ ಮಾತನಾಡಿರುವ ಪ್ರಕಾಶ್ ರಾಜ್, ಎಸ್‌ಐಆರ್‌ ಬಳಿಕ ಬೆಂಗಳೂರಿನ ಮತದಾರರ ಪಟ್ಟಿಯಿಂದ 65 ಲಕ್ಷ ಮತದಾರರ ಮತದಾನದ ಹಕ್ಕು ಅಳಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ. ತಾವು ಇದೇ ಕ್ಷೇತ್ರದಲ್ಲಿ ಹುಟ್ಟಿ, ಶಾಲೆ, ಕಾಲೇಜು ಹಾಗೂ ರಂಗಭೂಮಿ ಚಟುವಟಿಕೆಗಳನ್ನು ನಡೆಸಿದ್ದಾಗಿ ಅವರು ತಿಳಿಸಿದ್ದಾರೆ. ಅಲ್ಲದೆ, ಇದೇ ಕ್ಷೇತ್ರದಿಂದ ತಾವು ಲೋಕಸಭೆ ಚುನಾವಣೆಯ ಅಭ್ಯರ್ಥಿಯಾಗಿದ್ದನ್ನೂ ಅವರು ಉಲ್ಲೇಖಿಸಿದ್ದಾರೆ.

ತಮ್ಮ ಹೆಸರು ಮತದಾರರ ಪಟ್ಟಿಯಿಂದ ಹೇಗೆ ಕಾಣೆಯಾಗಿದೆ ಎಂಬುದನ್ನು ಪರಿಶೀಲಿಸಿ, ಮತ್ತೆ ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಲು ಯಾವ ಪ್ರಕ್ರಿಯೆ ಅನುಸರಿಸಬೇಕು ಎಂಬುದನ್ನು ನೋಡುತ್ತೇನೆ ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.

ಈ ಕುರಿತು ಪ್ರಕಾಶ್ ರಾಜ್ ಹಂಚಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ. SIR ಪ್ರಕ್ರಿಯೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಮತ್ತು ವಿವರಗಳನ್ನು ಪರಿಶೀಲಿಸುವಂತೆ ಚುನಾವಣಾ ಅಧಿಕಾರಿಗಳು ಮತದಾರರಿಗೆ ಸೂಚಿಸಿದ್ದಾರೆ.

Read More
Next Story