ರಾಯಚೂರು: ನೆತ್ತಿ ಸುಡುವ ಬಿಸಿಲಿಗೆ ಕಾರ್ಮಿಕ ಬಲಿ; ರಾಜ್ಯದಲ್ಲಿ ಹೆಚ್ಚುತ್ತಿರುವ ಹೀಟ್ ಸ್ಟ್ರೋಕ್ ಆತಂಕ
x

ವಿಪರೀತ ಬಿಸಿಲಿನ ಝಳ ತಾಳಲಾರದೆ ಉದ್ಯೋಗ ಖಾತ್ರಿ ಕೆಲಸಕ್ಕೆ ತೆರಳಿದ್ದ ಕಾರ್ಮಿಕರೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ.

ರಾಯಚೂರು: ನೆತ್ತಿ ಸುಡುವ ಬಿಸಿಲಿಗೆ ಕಾರ್ಮಿಕ ಬಲಿ; ರಾಜ್ಯದಲ್ಲಿ ಹೆಚ್ಚುತ್ತಿರುವ 'ಹೀಟ್ ಸ್ಟ್ರೋಕ್' ಆತಂಕ

ಬಿಸಿಲಾಘಾತಕ್ಕೆ ರಾಜ್ಯದಲ್ಲಿ ಸಂಭವಿಸುತ್ತಿರುವ ಸಾವುಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ಕಳೆದ ವಾರವಷ್ಟೇ ಬೆಳಗಾವಿ ಜಿಲ್ಲೆಯಲ್ಲಿ ಇದೇ ರೀತಿ ಅಧಿಕಾರಿಯೊಬ್ಬರು ಬಲಿಯಾಗಿದ್ದರು.

Click the Play button to hear this message in audio format

ರಾಜ್ಯದಲ್ಲಿ ಬಿಸಿಲಿನ ಪ್ರಕೋಪ ಮುಂದುವರಿದಿದ್ದು, ರಾಯಚೂರಿನಲ್ಲಿ 'ಹೀಟ್ ಸ್ಟ್ರೋಕ್'ಗೆ (Heat Stroke) ಮತ್ತೊಂದು ಬಲಿಯಾಗಿದೆ. ವಿಪರೀತ ಬಿಸಿಲಿನ ಝಳ ತಾಳಲಾರದೆ ಉದ್ಯೋಗ ಖಾತ್ರಿ ಕೆಲಸಕ್ಕೆ ತೆರಳಿದ್ದ ಕಾರ್ಮಿಕರೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ.

ಮೃತ ದುರ್ದೈವಿಯನ್ನು ರಾಯಚೂರು ಜಿಲ್ಲೆಯ ನಿವಾಸಿ ಹುಸೇನಪ್ಪ (45) ಎಂದು ಗುರುತಿಸಲಾಗಿದೆ. ಇವರು ಎಂದಿನಂತೆ 'ವಿಕಸಿತ ಭಾರತ - ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಅಜೀವಿಕಾ ಮಿಷನ್' ಅಡಿಯಲ್ಲಿ ಕೂಲಿ ಕೆಲಸಕ್ಕೆ ತೆರಳಿದ್ದರು. ಅತಿ ಹೆಚ್ಚಿನ ತಾಪಮಾನದ ನಡುವೆ ಮೈಮುರಿದು ದುಡಿಯುತ್ತಿದ್ದಾಗ, ವಿಪರೀತ ಉಷ್ಣಾಂಶದಿಂದಾಗಿ ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ, ಚಿಕಿತ್ಸೆಗೂ ಮುನ್ನವೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ವಾರ ಅಧಿಕಾರಿಯ ಸಾವು:

ಬಿಸಿಲಾಘಾತಕ್ಕೆ ರಾಜ್ಯದಲ್ಲಿ ಸಂಭವಿಸುತ್ತಿರುವ ಸಾವುಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ಕಳೆದ ವಾರವಷ್ಟೇ ಬೆಳಗಾವಿ ಜಿಲ್ಲೆಯಲ್ಲಿ ಇದೇ ರೀತಿ ಅಧಿಕಾರಿಯೊಬ್ಬರು ಬಲಿಯಾಗಿದ್ದರು. ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯಾಗಿದ್ದ ವೆಂಕಟೇಶ್ ಬಳ್ಳಾರಿ (35) ಅವರು ಬಸವೇಶ್ವರ ಜಯಂತಿ ನಿಮಿತ್ತ ನಡೆದ ಮೆರವಣಿಗೆ ವೇಳೆ ತಲೆತಿರುಗಿ ಕುಸಿದು ಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.

ಮುಂದಿನ ಐದು ದಿನ 'ಹೀಟ್ ವೇವ್' ಅಲರ್ಟ್:

ದಿನೇ ದಿನೇ ಏರಿಕೆಯಾಗುತ್ತಿರುವ ತಾಪಮಾನದಿಂದಾಗಿ ರಾಜ್ಯದಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಬಿಸಿಲಿನ ಝಳ ಹೆಚ್ಚಿರಲಿದ್ದು, 'ಹೀಟ್ ವೇವ್' ಅಲರ್ಟ್ ಘೋಷಿಸಲಾಗಿದೆ.

ಬೇಸಿಗೆಯ ತಾಪ ಹೆಚ್ಚಾಗುತ್ತಿದ್ದಂತೆ ಆಸ್ಪತ್ರೆಗಳಲ್ಲಿ ಡಿಹೈಡ್ರೇಷನ್ (ನಿರ್ಜಲೀಕರಣ), ಹೀಟ್ ಎಕ್ಸಾಶನ್ ಹಾಗೂ ಹೀಟ್ ಸ್ಟ್ರೋಕ್ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿವೆ. ಬಿಸಿಲಿನ ತಾಪದಿಂದಾಗಿ ಮಕ್ಕಳು, ವೃದ್ಧರು ಹಾಗೂ ಗರ್ಭಿಣಿಯರು ಹೆಚ್ಚಿನ ಅಪಾಯದಲ್ಲಿದ್ದು, ಮಧ್ಯಾಹ್ನದ ವೇಳೆ ಅನಗತ್ಯವಾಗಿ ಮನೆಯಿಂದ ಹೊರಬರದಂತೆ ಮತ್ತು ದೇಹವನ್ನು ತಂಪಾಗಿರಿಸಲು ಸಾಕಷ್ಟು ನೀರು, ಮಜ್ಜಿಗೆ ಕುಡಿಯುವಂತೆ ವೈದ್ಯರು ಗಂಭೀರ ಎಚ್ಚರಿಕೆ ನೀಡಿದ್ದಾರೆ.ರಾಜ್ಯದಲ್ಲಿ ಬಿಸಿಲಿನ ಪ್ರಕೋಪ ಮುಂದುವರಿದಿದ್ದು, ರಾಯಚೂರಿನಲ್ಲಿ 'ಹೀಟ್ ಸ್ಟ್ರೋಕ್'ಗೆ (Heat Stroke) ಮತ್ತೊಂದು ಬಲಿಯಾಗಿದೆ. ವಿಪರೀತ ಬಿಸಿಲಿನ ಝಳ ತಾಳಲಾರದೆ ಉದ್ಯೋಗ ಖಾತ್ರಿ ಕೆಲಸಕ್ಕೆ ತೆರಳಿದ್ದ ಕಾರ್ಮಿಕರೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ.

ಮೃತ ದುರ್ದೈವಿಯನ್ನು ರಾಯಚೂರು ಜಿಲ್ಲೆಯ ನಿವಾಸಿ ಹುಸೇನಪ್ಪ (45) ಎಂದು ಗುರುತಿಸಲಾಗಿದೆ. ಇವರು ಎಂದಿನಂತೆ 'ವಿಕಸಿತ ಭಾರತ - ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಅಜೀವಿಕಾ ಮಿಷನ್' ಅಡಿಯಲ್ಲಿ ಕೂಲಿ ಕೆಲಸಕ್ಕೆ ತೆರಳಿದ್ದರು. ಅತಿ ಹೆಚ್ಚಿನ ತಾಪಮಾನದ ನಡುವೆ ಮೈಮುರಿದು ದುಡಿಯುತ್ತಿದ್ದಾಗ, ವಿಪರೀತ ಉಷ್ಣಾಂಶದಿಂದಾಗಿ ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ, ಚಿಕಿತ್ಸೆಗೂ ಮುನ್ನವೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ವಾರ ಅಧಿಕಾರಿಯ ಸಾವು:

ಬಿಸಿಲಾಘಾತಕ್ಕೆ ರಾಜ್ಯದಲ್ಲಿ ಸಂಭವಿಸುತ್ತಿರುವ ಸಾವುಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ಕಳೆದ ವಾರವಷ್ಟೇ ಬೆಳಗಾವಿ ಜಿಲ್ಲೆಯಲ್ಲಿ ಇದೇ ರೀತಿ ಅಧಿಕಾರಿಯೊಬ್ಬರು ಬಲಿಯಾಗಿದ್ದರು. ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯಾಗಿದ್ದ ವೆಂಕಟೇಶ್ ಬಳ್ಳಾರಿ (35) ಅವರು ಬಸವೇಶ್ವರ ಜಯಂತಿ ನಿಮಿತ್ತ ನಡೆದ ಮೆರವಣಿಗೆ ವೇಳೆ ತಲೆತಿರುಗಿ ಕುಸಿದು ಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.

ಮುಂದಿನ ಐದು ದಿನ 'ಹೀಟ್ ವೇವ್' ಅಲರ್ಟ್:

ದಿನೇ ದಿನೇ ಏರಿಕೆಯಾಗುತ್ತಿರುವ ತಾಪಮಾನದಿಂದಾಗಿ ರಾಜ್ಯದಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಬಿಸಿಲಿನ ಝಳ ಹೆಚ್ಚಿರಲಿದ್ದು, 'ಹೀಟ್ ವೇವ್' ಅಲರ್ಟ್ ಘೋಷಿಸಲಾಗಿದೆ.

ಬೇಸಿಗೆಯ ತಾಪ ಹೆಚ್ಚಾಗುತ್ತಿದ್ದಂತೆ ಆಸ್ಪತ್ರೆಗಳಲ್ಲಿ ಡಿಹೈಡ್ರೇಷನ್ (ನಿರ್ಜಲೀಕರಣ), ಹೀಟ್ ಎಕ್ಸಾಶನ್ ಹಾಗೂ ಹೀಟ್ ಸ್ಟ್ರೋಕ್ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿವೆ. ಬಿಸಿಲಿನ ತಾಪದಿಂದಾಗಿ ಮಕ್ಕಳು, ವೃದ್ಧರು ಹಾಗೂ ಗರ್ಭಿಣಿಯರು ಹೆಚ್ಚಿನ ಅಪಾಯದಲ್ಲಿದ್ದು, ಮಧ್ಯಾಹ್ನದ ವೇಳೆ ಅನಗತ್ಯವಾಗಿ ಮನೆಯಿಂದ ಹೊರಬರದಂತೆ ಮತ್ತು ದೇಹವನ್ನು ತಂಪಾಗಿರಿಸಲು ಸಾಕಷ್ಟು ನೀರು, ಮಜ್ಜಿಗೆ ಕುಡಿಯುವಂತೆ ವೈದ್ಯರು ಗಂಭೀರ ಎಚ್ಚರಿಕೆ ನೀಡಿದ್ದಾರೆ.

Read More
Next Story