BMTC ಸ್ಪೇರ್ ಪಾರ್ಟ್ಸ್ ಖರೀದಿಯಲ್ಲಿ ಗೋಲ್‌ಮಾಲ್..3.97 ಕೋಟಿ ಅಕ್ರಮ! 21 ಮಂದಿ ವಿರುದ್ಧ FIR!
ಕಲಬುರಗಿಯಲ್ಲಿ ಬಿಜೆಪಿ ಬೃಹತ್ ಪಾದಯಾತ್ರೆ ಆಯೋಜಿಸಿದೆ. ಬುಧವಾರದ ಮೆರವಣಿಗೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗಿಯಾಗಲಿದ್ದು, 15 ಸಾವಿರ ಕಾರ್ಯಕರ್ತರು ಸೇರುವ ನಿರೀಕ್ಷೆಯಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯಲ್ಲಿ ಸ್ಪೇರ್ ಪಾರ್ಟ್ಸ್ ಖರೀದಿ ಹೆಸರಿನಲ್ಲಿ ಬರೋಬ್ಬರಿ ₹3.97 ಕೋಟಿ ಅಕ್ರಮ ನಡೆದಿರುವ ಆರೋಪ ಬೆಳಕಿಗೆ ಬಂದಿದೆ. 2022–23 ಮತ್ತು 2023–24ನೇ ಸಾಲಿನಲ್ಲಿ ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಸಂಸ್ಥೆಗೆ ನಷ್ಟ ಉಂಟುಮಾಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ 12 ಮಂದಿ ಬಿಎಂಟಿಸಿ ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿದಂತೆ ಒಟ್ಟು 21 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈಗಾಗಲೇ 12 ಮಂದಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದ್ದು, ಸ್ಪೇರ್ ಪಾರ್ಟ್ಸ್ ಪೂರೈಕೆದಾರರ ಪಾತ್ರದ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. BMTCಯಲ್ಲಿ ನಡೆದಿರುವ ಈ ಅಕ್ರಮದ ಹಿಂದಿರುವ ಜಾಲ ಯಾವುದು? ಎಂಬ ಪ್ರಶ್ನೆ ಮೂಡಿದೆ.
Next Story

