
ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭೂಗತ ಪಾತಕಿ ರವಿ ಪೂಜಾರಿ ಮಲ್ಪೆಗೆ ಆಗಮಿಸಿದ್ದಾರೆ. ನ್ಯಾಯಾಲಯದ ಅನುಮತಿ ಮೇರೆಗೆ ಪೊಲೀಸರು ಬಿಗಿ ಭದ್ರತೆಯಲ್ಲಿ ಕರೆತಂದಿದ್ದಾರೆ.
ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಮಲ್ಪೆಗೆ ಬಂದ ರವಿ ಪೂಜಾರಿ
ಮಲ್ಪೆಯ ನೆರ್ಗಿಯಲ್ಲಿರುವ ರವಿ ಪೂಜಾರಿ ಅವರ ಹಿರಿಯ ಮನೆಯಲ್ಲಿ ಇಂದು (ಶನಿವಾರ) ಅಂತ್ಯಸಂಸ್ಕಾರ ನಡೆಯಲಿದೆ. ನ್ಯಾಯಾಲಯದ ಅನುಮತಿ ಮೇರೆಗೆ ಪೊಲೀಸರು ಅವರನ್ನು ಬಿಗಿ ಭದ್ರತೆಯಲ್ಲಿ ಕರೆತಂದಿದ್ದಾರೆ.
ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭೂಗತ ಪಾತಕಿ ರವಿ ಪೂಜಾರಿಯನ್ನು ಪೊಲೀಸರು ಬಿಗಿ ಭದ್ರತೆಯಲ್ಲಿ ಉಡುಪಿಯ ಮಲ್ಪೆಗೆ ಕರೆತಂದಿದ್ದಾರೆ. ರವಿ ಪೂಜಾರಿ ಅವರ ತಾಯಿ ಸುಶೀಲಾ ಪೂಜಾರ್ತಿ (86) ಅವರು ಹೃದಯಾಘಾತದಿಂದ ನಿಧನರಾಗಿದ್ದರು.
ಸುಶೀಲಾ ಪೂಜಾರ್ತಿ ಅವರಿಗೆ 86 ವರ್ಷ ವಯಸ್ಸಾಗಿತ್ತು. ಅವರಿಗೆ ಐವರು ಮಕ್ಕಳು, ಇಬ್ಬರು ಹೆಣ್ಣುಮಕ್ಕಳು ಹಾಗೂ ರವಿ ಪೂಜಾರಿ ಸೇರಿದಂತೆ ಮೂವರು ಗಂಡು ಮಕ್ಕಳಿದ್ದಾರೆ. ತಾಯಿಯ ನಿಧನದ ಹಿನ್ನೆಲೆಯಲ್ಲಿ ಅಂತಿಮ ವಿಧಿವಿಧಾನಗಳಲ್ಲಿ ಪಾಲ್ಗೊಳ್ಳಲು ರವಿ ಪೂಜಾರಿ ಮಲ್ಪೆಗೆ ಆಗಮಿಸಿದ್ದಾನೆ
ಮಲ್ಪೆಯ ನೆರ್ಗಿಯಲ್ಲಿರುವ ರವಿ ಪೂಜಾರಿಯ ತರವಾಡು ಮನೆಯಲ್ಲಿ ಶನಿವಾರ ಅಂತ್ಯಸಂಸ್ಕಾರ ನಡೆಯಲಿದೆ. ನ್ಯಾಯಾಲಯದ ಅನುಮತಿ ಮೇರೆಗೆ ಪೊಲೀಸರು ಅವರನ್ನು ಬಿಗಿ ಭದ್ರತೆಯಲ್ಲಿ ಕರೆತಂದಿದ್ದಾರೆ. ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

