ಆರ್‌ಎಸ್‌ಎಸ್‌ ಕಚೇರಿ ಮೇಲೆ ಬಾಂಬ್‌ ದಾಳಿ ಪ್ರಕರಣ: ಕರ್ನಾಟಕ ಸೇರಿದಂತೆ 4 ರಾಜ್ಯಗಳಲ್ಲಿ ಇಡಿ ರೇಡ್
x

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಆರ್‌ಎಸ್‌ಎಸ್‌ ಕಚೇರಿ ಮೇಲೆ ಬಾಂಬ್‌ ದಾಳಿ ಪ್ರಕರಣ: ಕರ್ನಾಟಕ ಸೇರಿದಂತೆ 4 ರಾಜ್ಯಗಳಲ್ಲಿ ಇಡಿ ರೇಡ್

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಎನ್‌ಐಎ ತನಿಖೆಯಲ್ಲಿ ದೊರೆತ ಮಾಹಿತಿಯ ಆಧಾರದ ಮೇಲೆ ಇಡಿ ಹಣಕಾಸಿನ ಅಂಶಗಳ ಕುರಿತು ತನಿಖೆ ಮುಂದುವರಿಸಿದೆ.


Click the Play button to hear this message in audio format

ಜಾರ್ಖಂಡ್‌ನ ರಾಂಚಿಯಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಕಚೇರಿಯ ಮೇಲೆ ಜೂ.18 ರಂದು ನಡೆದ ಪೆಟ್ರೋಲ್ ಬಾಂಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕರ್ನಾಟಕ ಸೇರಿ ದೇಶದ ನಾಲ್ಕು ಪ್ರಮುಖ ರಾಜ್ಯಗಳಲ್ಲಿ ಏಕಕಾಲಕ್ಕೆ ಬೃಹತ್ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

ಪ್ರಕರಣದ ಮುಂದುವರಿದ ಭಾಗವಾಗಿ ಜಾರ್ಖಂಡ್, ಬಿಹಾರ, ದೆಹಲಿ ಹಾಗೂ ಕರ್ನಾಟಕದಲ್ಲಿ ಇಡಿ ಅಧಿಕಾರಿಗಳ ತಂಡ ಕಾರ್ಯಾಚರಣೆಗೆ ಇಳಿದಿದೆ. ಈ ದಾಳಿಯ ಸಂದರ್ಭದಲ್ಲಿ ಶಂಕಿತ ಆರೋಪಿಗಳು ಮತ್ತು ಅವರ ನಿಕಟವರ್ತಿಗಳಿಗೆ ಸೇರಿದ ನಿವಾಸಗಳು ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ, ಹಣಕಾಸು ವಹಿವಾಟಿಗೆ ಸಂಬಂಧಿಸಿದ ಪ್ರಮುಖ ದಾಖಲೆಗಳು ಹಾಗೂ ಡಿಜಿಟಲ್ ಪುರಾವೆಗಳನ್ನು ಪರಿಶೀಲನೆಗೆ ಒಳಪಡಿಸಲಾಗಿದೆ.

ಟೆರರ್ ಫಂಡಿಂಗ್ ಮತ್ತು ಅಕ್ರಮ ಹಣಕಾಸು ಜಾಲದ ಶಂಕೆ

ರಾಂಚಿಯ ಚುಟಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾರಣ್‌ಪುರದಲ್ಲಿರುವ RSS ಕಚೇರಿಯನ್ನು ಗುರಿಯಾಗಿಸಿಕೊಂಡು ಜೂನ್ ತಿಂಗಳಿನಲ್ಲಿ ಪೆಟ್ರೋಲ್ ಬಾಂಬ್ ಎಸೆಯಲಾಗಿತ್ತು. ಆರಂಭದಲ್ಲಿ ಸ್ಥಳೀಯ ಪೊಲೀಸರು ತನಿಖೆ ನಡೆಸಿದ್ದ ಈ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ಹಸ್ತಾಂತರಿಸಲಾಗಿತ್ತು. ತನಿಖೆ ವೇಳೆ ಈ ದಾಳಿಯ ಹಿಂದೆ ದೊಡ್ಡ ಮಟ್ಟದ ಅಕ್ರಮ ಹಣಕಾಸಿನ ಜಾಲ ಹಾಗೂ ಸಂಭವನೀಯ 'ಟೆರರ್ ಫಂಡಿಂಗ್' ಅಡಗಿರುವ ಸುಳಿವು ಸಿಕ್ಕಿದ್ದರಿಂದ ಇದೀಗ ಜಾರಿ ನಿರ್ದೇಶನಾಲಯ ಕೂಡ ರಂಗಕ್ಕಿಳಿದಿದೆ.

ಇಬ್ಬರು ಪ್ರಮುಖ ಆರೋಪಿಗಳ ಬಂಧನ

ಎನ್‌ಐಎ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ದೊರೆತ ಮಹತ್ವದ ಸುಳಿವುಗಳ ಆಧಾರದ ಮೇಲೆ ಈಗಾಗಲೇ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಸಿಕ್ಕ ಮಾಹಿತಿಯ ಹಿನ್ನೆಲೆಯಲ್ಲಿ, ಈ ಕೃತ್ಯಕ್ಕೆ ಹಣಕಾಸು ನೆರವು ನೀಡಿರುವ ಮೂಲಗಳನ್ನು ಪತ್ತೆಹಚ್ಚಲು ಇಡಿ ತನ್ನ ತನಿಖಾ ವ್ಯಾಪ್ತಿಯನ್ನು ವಿಸ್ತರಿಸಿದೆ.

Read More
Next Story