ಶಿವಮೊಗ್ಗ ದಸರಾದಲ್ಲಿ ಅಂಬಾರಿ ಬೀಳಿಸಿದ ಆನೆ ಸೋಮಣ್ಣ; ಅರ್ಧಕ್ಕೆ ನಿಂತ ಮೆರವಣಿಗೆ!
ಶಿವಮೊಗ್ಗ ದಸರಾ ಜಂಬೂಸವಾರಿ ಮೆರವಣಿಗೆಯಲ್ಲಿ ಅನಿರೀಕ್ಷಿತ ಘಟನೆ ನಡೆದಿದೆ. ಚಿನ್ನದ ಅಂಬಾರಿಯನ್ನು ಹೊತ್ತು ಸಾಗುತ್ತಿದ್ದ ಸೋಮಣ್ಣ ಆನೆ ದಾರಿ ತಪ್ಪಿ ನಿಯಂತ್ರಣ ತಪ್ಪಿದ ಹಿನ್ನೆಲೆಯಲ್ಲಿ ಮೆರವಣಿಗೆ ಮಧ್ಯದಲ್ಲೇ ಸ್ಥಗಿತಗೊಂಡಿದೆ ಎಂದು ವರದಿಯಾಗಿದೆ.
ಶಿವಮೊಗ್ಗ ದಸರಾ ಜಂಬೂಸವಾರಿ ಮೆರವಣಿಗೆಯಲ್ಲಿ ಅನಿರೀಕ್ಷಿತ ಘಟನೆ ನಡೆದಿದೆ. ಚಿನ್ನದ ಅಂಬಾರಿಯನ್ನು ಹೊತ್ತು ಸಾಗುತ್ತಿದ್ದ ಸೋಮಣ್ಣ ಆನೆ ದಾರಿ ತಪ್ಪಿ ನಿಯಂತ್ರಣ ತಪ್ಪಿದ ಹಿನ್ನೆಲೆಯಲ್ಲಿ ಮೆರವಣಿಗೆ ಮಧ್ಯದಲ್ಲೇ ಸ್ಥಗಿತಗೊಂಡಿದೆ ಎಂದು ವರದಿಯಾಗಿದೆ. ಜಂಬೂಸವಾರಿ ಸಾಗುತ್ತಿದ್ದ ವೇಳೆ ಆನೆ ದಾರಿ ಬದಲಿಸಿದ್ದರಿಂದ ಮೆರವಣಿಗೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಆನೆಯನ್ನು ನಿಯಂತ್ರಣಕ್ಕೆ ತಂದು ಮೆರವಣಿಗೆಯನ್ನು ಮುಂದುವರಿಸಲು ಸಿಬ್ಬಂದಿ ಪ್ರಯತ್ನಿಸಿದರು. ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ನಡೆದ ಈ ಘಟನೆಯ ಸಂಪೂರ್ಣ ವಿವರಗಳು ಹಾಗೂ ಸ್ಥಳದ ದೃಶ್ಯಗಳಿಗಾಗಿ ವಿಡಿಯೊ ವೀಕ್ಷಿಸಿ.
Next Story

