x

SIR Protests| ದೇಶಾದ್ಯಂತ ಸುಮಾರು 13 ಕೋಟಿ ಮತಗಳನ್ನು ಅಕ್ರಮವಾಗಿ ಅಳಿಸಿ ಹಾಕಲಾಗಿದೆ - ದಿಪ್ಕೆ ಆರೋಪ

2004ರ ಲೋಕಸಭಾ ಚುನಾವಣೆಯಲ್ಲಿ ಶೇ. 2ರಷ್ಟು ಮತಗಳ ಅಂತರದಿಂದ ಫಲಿತಾಂಶ ನಿರ್ಧಾರವಾಗಿತ್ತು. ಇದೇ ಭಯದಿಂದ ಆಡಳಿತಾರೂಢ ಬಿಜೆಪಿ ಈಗ ಮತದಾರರ ಪಟ್ಟಿಯೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಅಭಿಜೀತ್‌ ದಿಪ್ಕೆ ಕಿಡಿಕಾರಿದರು.


Click the Play button to hear this message in audio format

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ವಜಾ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿರಿಸಿ ನಾಗರಿಕ ಹಕ್ಕು ಸಂಘಟನೆಗಳು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನೆ ಮತ್ತು ಜನತಾ ನ್ಯಾಯಾಲಯ (People's Tribunal) ಕಾರ್ಯಕ್ರಮಗಳನ್ನು ಗುರುವಾರ ಏರ್ಪಡಿಸಿದೆ.

ಮತದಾರರ ಪಟ್ಟಿಯ ಎಸ್‌ಐಆರ್ (Special Intensive Revision) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಗಂಭೀರ ಲೋಪದೋಷಗಳನ್ನು ಖಂಡಿಸಿ, ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ.

ಸಿಜೆಪಿ (CJP) ಸಂಸ್ಥಾಪಕ ಅಭೀಜಿತ್ ದೀಪ್ಕೆ (Abhijeet Dipke), ಪ್ರಸಿದ್ಧ ಯೂಟ್ಯೂಬರ್ ಧ್ರುವ್ ರಾಠಿ, ನಟ ಪ್ರಕಾಶ್ ರಾಜ್, ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಾಧೀಶ ಜ. ಗೋಪಾಲಗೌಡ ಹಾಗೂ ಹಲವು ನಾಗರಿಕ ಹಕ್ಕುಗಳ ಹೋರಾಟಗಾರರು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.

ರಾಜ್ಯದ ವಿವಿಧ ಭಾಗಗಳಲ್ಲಿ ಮತದಾರರ ಪಟ್ಟಿಯಿಂದ ಅನ್ಯಾಯವಾಗಿ ಹೆಸರು ಕಳೆದುಕೊಂಡ ಸಂತ್ರಸ್ತರು ಜನತಾ ನ್ಯಾಯಾಲಯದ ಮುಂದೆ ತಮ್ಮ ಕುಂದುಕೊರತೆಗಳನ್ನು ತೋಡಿಕೊಳ್ಳಲಿದ್ದಾರೆ. ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಲಾಯಿತು ಹಾಗೂ ಎಸ್‌ಐಆರ್ ಪ್ರಕ್ರಿಯೆಯಡಿ ಕೈಗೊಂಡಿರುವ ಹೆಸರು ತಡೆ/ವಜಾ ನಿರ್ಧಾರಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಲು ನಿರ್ಧರಿಸಲಾಗಿದೆ.

ಜನತಾ ನ್ಯಾಯಾಲಯದ ನಂತರ ಚುನಾವಣಾ ಆಯೋಗದ ಕ್ರಮಗಳನ್ನು ಖಂಡಿಸಿ ಸಾಂಕೇತಿಕವಾಗಿ 'ಚಪ್ಪಲಿ ಪ್ರತಿಭಟನೆ' (Chappal Protest) ನಡೆಸಲೂ ನಿರ್ಧರಿಸಲಾಗಿದೆ. ಈ ಹೋರಾಟದ ಮುಂದಿನ ಭಾಗವಾಗಿ ಮುಂಬರುವ ಅಕ್ಟೋಬರ್ 10 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆಯನ್ನು ಆಯೋಜಿಸುವುದಾಗಿ ಸಿಜೆಪಿ ಸಂಘಟಕರು ತಿಳಿಸಿದ್ದಾರೆ.

Live Updates

  • 8 Oct 2026 12:32 PM IST

    ಧ್ರುವ್ ರಾಠಿ, ಸಿಜೆಪಿ ಸಂಸ್ಥಾಪಕ ಅಭಿಜೀತ್‌ ದಿಪ್ಕೆ ಹೋರಾಟದಲ್ಲಿ ಭಾಗಿ

    ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮತದಾರರ ಪಟ್ಟಿಯ ಎಸ್‌ಐಆರ್‌ ಪ್ರಕ್ರಿಯೆಯ ಲೋಪದೋಷಗಳ ವಿರುದ್ಧ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದಾರೆ. ಈ ಹೋರಾಟಕ್ಕೆ ಬೆಂಬಲ ಸೂಚಿಸಲು ಯೂಟ್ಯೂಬರ್ ಧ್ರುವ್ ರಾಠಿ, ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಮತ್ತು ಖ್ಯಾತ ನಟ ಪ್ರಕಾಶ್ ರಾಜ್ ಆಗಮಿಸಿದ್ದಾರೆ. ಚುನಾವಣಾ ಆಯೋಗದ ಕಾರ್ಯವೈಕರಿ ಮತ್ತು ಸಂವಿಧಾನಬದ್ಧ ಹಕ್ಕುಗಳ ಉಲ್ಲಂಘನೆಯ ವಿರುದ್ಧ ವೇದಿಕೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

  • ಫ್ರೀಡಂಪಾರ್ಕ್‌ನತ್ತ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಜನತೆ
    8 Oct 2026 12:25 PM IST

    ಫ್ರೀಡಂಪಾರ್ಕ್‌ನತ್ತ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಜನತೆ

    ಮತದಾರರ ಪಟ್ಟಿಯ ಎಸ್‌ಐಆರ್‌ ಪ್ರಕ್ರಿಯೆಯ ಲೋಪದೋಷಗಳನ್ನು ವಿರೋಧಿಸಿ, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ಜನತಾ ನ್ಯಾಯಾಲಯ ಕಾರ್ಯಕ್ರಮ ನಡೆಯುತ್ತಿದೆ. ಮತದಾರರ ಪಟ್ಟಿಯಿಂದ ಅಕ್ರಮವಾಗಿ ಹೆಸರು ಕೈಬಿಟ್ಟಿರುವ ಕ್ರಮವನ್ನು ಖಂಡಿಸಿ, ಸಂತ್ರಸ್ತರು ಹಾಗೂ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಫ್ರೀಡಂ ಪಾರ್ಕ್‌ಗೆ ಆಗಮಿಸುತ್ತಿದ್ದಾರೆ. ಈ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಅವರು ವೇದಿಕೆಗೆ ಆಗಮಿಸಿದ್ದಾರೆ. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕಿನ ರಕ್ಷಣೆ ಹಾಗೂ ಚುನಾವಣಾ ಆಯೋಗದ ನಿಷ್ಪಕ್ಷಪಾತ ಕಾರ್ಯವೈಖರಿಯ ಬಗ್ಗೆ ಇಲ್ಲಿ ಗಂಭೀರ ಚರ್ಚೆ ನಡೆಯುತ್ತಿದೆ. ಧ್ರುವ್ ರಾಠಿ ಮತ್ತು ಪ್ರಕಾಶ್ ರಾಜ್ ಅವರಂತಹ ಗಣ್ಯರ ಉಪಸ್ಥಿತಿಯು ಹೋರಾಟಕ್ಕೆ ಮತ್ತಷ್ಟು ಬಲ ತುಂಬಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

  • 8 Oct 2026 12:19 PM IST

    ಅ.10ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ

    ಬೆಂಗಳೂರಿನಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಪ್ರಕರಣದ ವಿರುದ್ಧದ ಹೋರಾಟಕ್ಕೆ ಯೂಟ್ಯೂಬರ್ ಧ್ರುವ್ ರಾಠಿ ಸಾಥ್ ನೀಡಿದ್ದಾರೆ. ಬೆಂಗಳೂರು ನಗರಕ್ಕೆ ಆಗಮಿಸಿರುವ ಅವರು, ಸಂತ್ರಸ್ತರ ಪರವಾಗಿ ಧ್ವನಿ ಎತ್ತಿದ್ದಾರೆ. ಮತದಾರರ ಹಕ್ಕುಗಳ ರಕ್ಷಣೆಗಾಗಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವ ಸುಳಿವು ನೀಡಿದ್ದಾರೆ. ಈ ಹೋರಾಟ ಕೇವಲ ಬೆಂಗಳೂರಿಗೆ ಸೀಮಿತವಾಗಿಲ್ಲ. ಇದರ ಮುಂದುವರಿದ ಭಾಗವಾಗಿ ಅಕ್ಟೋಬರ್ 10ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಚುನಾವಣಾ ಆಯೋಗದ ಲೋಪದೋಷಗಳು ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಣೆಗಾಗಿ ದೇಶಾದ್ಯಂತ ಧ್ವನಿ ಎತ್ತಲು ನಿರ್ಧರಿಸಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿನ ಪ್ರತಿಭಟನೆಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಈ ವಿಷಯ ಇದೀಗ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಂವಿಧಾನಬದ್ಧ ಹಕ್ಕುಗಳಿಗಾಗಿ ನಾಗರಿಕ ಸಮಾಜ ಒಗ್ಗೂಡುತ್ತಿರುವುದು ಗಮನಾರ್ಹವಾಗಿದೆ.




  • 8 Oct 2026 12:16 PM IST

    ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು ಹೋರಾಟಕ್ಕೆ ಕರೆ

    ಚುನಾವಣಾ ಆಯೋಗದ ಕಾರ್ಯವೈಖರಿಯ ವಿರುದ್ಧ ಸಾಮಾಜಿಕ ಹೋರಾಟಗಾರರು ಸಿಡಿದೆದ್ದಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನಿರ್ಧಾರಗಳು ಹಾಗೂ ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಗಂಭೀರ ಲೋಪದೋಷಗಳನ್ನು ಖಂಡಿಸಿ ಕಠಿಣ ನಿಲುವು ತಳೆಯಲಾಗಿದೆ. ಈ ಕುರಿತು ವಿಡಿಯೊ ಸಂದೇಶವೊಂದನ್ನು ಹಂಚಿಕೊಂಡಿರುವ ಹೋರಾಟಗಾರರು, ಆಯೋಗದ ನಿಷ್ಪಕ್ಷಪಾತದ ಬಗ್ಗೆ ಪ್ರಶ್ನೆಗಳನ್ನೆತ್ತಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಜ್ಞಾನೇಶ್ ಕುಮಾರ್ ಅವರನ್ನು ಉದ್ದೇಶಿಸಿ, "Gyanesh, it's done bro. Jai Hind" ಎಂದು ಬರೆದುಕೊಂಡು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು ಹೋರಾಟಕ್ಕೆ ಕರೆ ನೀಡಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರು ಕಡಿತಗೊಳಿಸುವ ಪ್ರಕ್ರಿಯೆಯು ಸಂವಿಧಾನಬದ್ಧವಾಗಿಲ್ಲವೆಂದು ಆರೋಪಿಸಿರುವ ಅವರು, ಚುನಾವಣಾ ಆಯೋಗವು ತಕ್ಷಣವೇ ಎಚ್ಚೆತ್ತುಕೊಂಡು ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕೆಂದು ಆಗ್ರಹಿಸಿದ್ದಾರೆ. ಈ ಬೆನ್ನಲ್ಲೇ ಬೆಂಗಳೂರಿನಲ್ಲಿ ಪ್ರತಿಭಟನೆಗಳು ತೀವ್ರಗೊಂಡಿವೆ.

  • 8 Oct 2026 12:07 PM IST

    ಫ್ರೀಡಂ ಪಾರ್ಕ್‌ ಸುತ್ತ ಪೊಲೀಸ್‌ ಬಂದೋಬಸ್ತ್

    ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಿಜೆಪಿ (CJP) ಆಯೋಜಿಸಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದ ಸುತ್ತ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದ್ದು, ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರತಿಭಟನಾಕಾರರ ಚಲನವಲನದ ಮೇಲೆ ಹದ್ದಿನ ಕಣ್ಣಿಡಲಾಗಿದ್ದು, ಫ್ರೀಡಂ ಪಾರ್ಕ್ ಬಳಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.




  • 8 Oct 2026 12:02 PM IST

    ಮತದಾರರ ಪಟ್ಟಿಯಿಂದ ಹೆಸರು ಬಿಟ್ಟಿರುವುದಕ್ಕೆ ಆಕ್ರೋಶ

    ಭಾರತೀಯ ಚುನಾವಣಾ ಆಯೋಗ ವಿರುದ್ಧ ಬೆಂಗಳೂರಿನಲ್ಲಿ ನಡೆಯುತ್ತಿರುವ ಬೃಹತ್‌ ಪ್ರತಿಭಟನೆಯಲ್ಲಿ ಯೂಟ್ಯೂಬರ್ ಧ್ರುವ್ ರಾಠಿ, ಸಿಜೆಪಿ ಸಂಸ್ಥಾಪಕ ಅಭೀಜಿತ್ ದೀಪ್ಕೆ ಹಾಗೂ ನಟ ಪ್ರಕಾಶ್ ರಾಜ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಮತದಾರರ ಪಟ್ಟಿಯಿಂದ ಅಕ್ರಮವಾಗಿ ಹೆಸರು ಕೈಬಿಟ್ಟಿರುವುದನ್ನು ಖಂಡಿಸಿದ ಅವರು, ಸಂತ್ರಸ್ತರ ಪರ ಧ್ವನಿ ಎತ್ತಿದರು. ಫಾರ್ಮ್-7 ದುರ್ಬಳಕೆ ಹಾಗೂ ಪ್ರಜಾಪ್ರಭುತ್ವದ ಹಕ್ಕುಗಳ ಕಸಿಯುವಿಕೆಯ ವಿರುದ್ಧ ಈ ಗಣ್ಯರು ಜಂಟಿಯಾಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

  • ಧ್ರುವ್‌ ರಾಠಿ ಬಗ್ಗೆ ಪ್ರಕಾಶ್‌ ರೈ ಹೇಳಿಕೆ
    8 Oct 2026 11:45 AM IST

    ಧ್ರುವ್‌ ರಾಠಿ ಬಗ್ಗೆ ಪ್ರಕಾಶ್‌ ರೈ ಹೇಳಿಕೆ

    ಪ್ರತಿಭಟನೆಯಲ್ಲಿ ಭಾಗವಹಿಸುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊ ಹಂಚಿಕೊಂಡಿದ್ದ ಧ್ರುವ್ ರಾಠಿ, "ಇದು ದೇಶದ ಪ್ರಜಾಪ್ರಭುತ್ವ ಹಾಗೂ ಮತದಾನದ ಹಕ್ಕನ್ನು ಉಳಿಸಲು ನಡೆಯುತ್ತಿರುವ ಹೋರಾಟ. ಪ್ರತಿಯೊಬ್ಬ ನಾಗರಿಕನೂ ಮತದಾರರ ಪಟ್ಟಿಯ ಅಕ್ರಮಗಳ ವಿರುದ್ಧ ಧ್ವನಿ ಎತ್ತಬೇಕಿದೆ" ಎಂದು ಹೇಳಿದ್ದಾರೆ.

     'ವಿಶೇಷ ಅತಿಥಿ'ಯಾಗಿ ಆಗಮಿಸಿರುವ ಧ್ರುವ್ ರಾಠಿ, ಸಿಜೆಪಿ (CJP) ಸಂಸ್ಥಾಪಕ ಅಭೀಜಿತ್ ದೀಪ್ಕೆ ಹಾಗೂ ನಟ ಪ್ರಕಾಶ್ ರಾಜ್ ಅವರೊಂದಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ. ಪ್ರಕಾಶ್‌ ರೈ ಈ ಬಗ್ಗೆ ವಿವರ ನೀಡಿದ್ದಾರೆ.



Read More
Next Story