x

ಧಾರವಾಡ | ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಶಾಕ್

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ. ಜೀವಾವಧಿ ಶಿಕ್ಷೆ ಅಮಾನತು ಆದೇಶ ರದ್ದುಪಡಿಸಿ, ಎರಡು ವಾರಗಳಲ್ಲಿ ಶರಣಾಗಲು ಸೂಚಿಸಿದೆ.


Click the Play button to hear this message in audio format

2016ರ ಧಾರವಾಡದ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ದೊಡ್ಡ ಶಾಕ್ ನೀಡಿದೆ. ವಿನಯ್ ಕುಲಕರ್ಣಿ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಅಲ್ಲದೆ, ಎರಡು ವಾರಗಳ ಒಳಗೆ ಶರಣಾಗುವಂತೆ ವಿನಯ್ ಕುಲಕರ್ಣಿಗೆ ನಿರ್ದೇಶನ ನೀಡಿದೆ. ಈ ಬೆಳವಣಿಗೆಯಿಂದ ಯೋಗೇಶ್ ಗೌಡ ಕೊಲೆ ಪ್ರಕರಣ ಮತ್ತೆ ಮಹತ್ವದ ತಿರುವು ಪಡೆದುಕೊಂಡಿದೆ. ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಧಾರವಾಡದಲ್ಲಿರುವ ವಿನಯ್ ಕುಲಕರ್ಣಿ ನಿವಾಸದ ಹೊರಗಿನ ದೃಶ್ಯಗಳು ಇಲ್ಲಿವೆ. ಪ್ರಕರಣದ ಮುಂದಿನ ಬೆಳವಣಿಗೆಗಳ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿ.

Read More
Next Story