
ತಮಿಳುನಾಡು ಮಾಜಿ ಸಿಎಂ ಎಂ.ಕೆ. ಸ್ಟಾಲಿನ್ ಪತ್ನಿ ದುರ್ಗಾ ಸ್ಟಾಲಿನ್ ಕುಟುಂಬ ಸಮೇತರಾಗಿ ದೇವಾಲಯಕ್ಕೆ ಭೇಟಿ ನೀಡಿದರು.
ಮಗ ಸನಾತನ ವಿರೋಧಿಯಾದರೂ ಸ್ಟಾಲಿನ್ ಪತ್ನಿ ಚಾಮುಂಡೇಶ್ವರಿಯ ಮಹಾ ಭಕ್ತೆ!
ತಮಿಳುನಾಡಿನ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಪ್ರತಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರು ಈ ಹಿಂದೆ 'ಸನಾತನ ಧರ್ಮ'ದ ವಿರುದ್ಧ ನೀಡಿದ್ದ ಹೇಳಿಕೆ ದೇಶಾದ್ಯಂತ ತೀವ್ರ ರಾಜಕೀಯ ಸಂಚಲನ ಮತ್ತು ವಿವಾದಕ್ಕೆ ಕಾರಣವಾಗಿತ್ತು.
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪತ್ನಿ ದುರ್ಗಾ ಸ್ಟಾಲಿನ್ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಪ್ರಸಿದ್ಧ ಶ್ರೀ ನಿಮಿಷಾಂಬಾ ದೇವಿ ಹಾಗೂ ಮೈಸೂರಿನ ಅಧಿದೇವತೆ ಚಾಮುಂಡಿ ಬೆಟ್ಟಕ್ಕೆ ತೆರಳಿದ ದುರ್ಗಾ ಸ್ಟಾಲಿನ್ ಅವರು, ಕುಟುಂಬದ ಕಲ್ಯಾಣಕ್ಕಾಗಿ ದೇವಿಯ ಮೊರೆ ಹೋಗಿದ್ದಾರೆ.
ತಮಿಳುನಾಡಿನ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಪ್ರತಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರು ಈ ಹಿಂದೆ 'ಸನಾತನ ಧರ್ಮ'ದ ವಿರುದ್ಧ ನೀಡಿದ್ದ ಹೇಳಿಕೆ ದೇಶಾದ್ಯಂತ ತೀವ್ರ ರಾಜಕೀಯ ಸಂಚಲನ ಮತ್ತು ವಿವಾದಕ್ಕೆ ಕಾರಣವಾಗಿತ್ತು. ತಮಿಳುನಾಡು ವಿಧಾನಸಭೆಯಲ್ಲೇ ಸನಾತನ ಧರ್ಮದ ವಿರುದ್ಧ ಆಕ್ರೋಶ ಹೊರಹಾಕಿದ್ದ ಉದಯನಿಧಿ, ತೀವ್ರ ಟೀಕೆಗೆ ಗುರಿಯಾಗಿದ್ದರು. ಮಗ ಸನಾತನ ಧರ್ಮದ ವಿರೋಧಿಯಾಗಿ ಗುರುತಿಸಿಕೊಂಡಿದ್ದರೂ, ತಾಯಿ ದುರ್ಗಾ ಸ್ಟಾಲಿನ್ ಮಾತ್ರ ಪರಮ ದೈವಭಕ್ತೆಯಾಗಿದ್ದು, ಹಿಂದೂ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡುವುದು ಸಾರ್ವಜನಿಕ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ.
ಚಾಮುಂಡೇಶ್ವರಿ ಸನ್ನಿಧಿಯಲ್ಲಿ ವಿಶೇಷ ಅರ್ಚನೆ
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ದುರ್ಗಾ ಸ್ಟಾಲಿನ್ ಅವರಿಗೆ ದೇವಾಲಯದ ಆಡಳಿತ ಮಂಡಳಿ ಹಾಗೂ ಅರ್ಚಕರು ಆತ್ಮೀಯವಾಗಿ ಸ್ವಾಗತಿಸಿದರು. ದೇವಿಯ ಸನ್ನಿಧಿಯಲ್ಲಿ ಕುಳಿತು ವಿಶೇಷ ಅರ್ಚನೆ, ಮಹಾಮಂಗಳಾರತಿ ನೆರವೇರಿಸಿದ ಅವರು ಪ್ರಸಾದ ಸ್ವೀಕರಿಸಿದರು. ಇದಕ್ಕೂ ಮುನ್ನ ಶ್ರೀರಂಗಪಟ್ಟಣದ ಗಂಜಾಂನಲ್ಲಿರುವ ನಿಮಿಷಾಂಬಾ ದೇವಸ್ಥಾನಕ್ಕೂ ಭೇಟಿ ನೀಡಿ ವಿಶೇಷ ಹರಕೆ ಸಲ್ಲಿಸಿದರು.
ರಾಜಕೀಯವಾಗಿ ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ, ಕುಟುಂಬದ ಯೋಗಕ್ಷೇಮಕ್ಕಾಗಿ ತಾಯಿ ದುರ್ಗಾ ಸ್ಟಾಲಿನ್ ಅವರು ದೇವಿಯ ಸನ್ನಿಧಿಗೆ ಆಗಮಿಸಿ ಪ್ರಾರ್ಥನೆ ಸಲ್ಲಿಸಿರುವುದು ಉಭಯ ರಾಜ್ಯಗಳ ರಾಜಕೀಯ ವಲಯದಲ್ಲಿ ಈಗ ಚರ್ಚೆಗೆ ಗ್ರಾಸವಾಗಿದೆ.

