x

ಶಿಕ್ಷಕರ ನೇಮಕಾತಿ: ಜನವರಿಯಲ್ಲಿ ಪರೀಕ್ಷೆ, ಮಾರ್ಚ್–ಏಪ್ರಿಲ್‌ನಲ್ಲಿ ನೇಮಕಾತಿ ಆದೇಶ

ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಚುರುಕುಗೊಳಿಸಲು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.


ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಚುರುಕುಗೊಳಿಸಲು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜನವರಿಯೊಳಗೆ ಪರೀಕ್ಷೆ ಪ್ರಕ್ರಿಯೆ ಪೂರ್ಣಗೊಳಿಸಿ, ಮಾರ್ಚ್–ಏಪ್ರಿಲ್ ವೇಳೆಗೆ ನೇಮಕಾತಿ ಆದೇಶ ನೀಡಬೇಕು ಎಂದು ತಿಳಿಸಿದ್ದಾರೆ. ಜೂನ್‌ನಲ್ಲಿ ಹೊಸ ಶೈಕ್ಷಣಿಕ ವರ್ಷ ಆರಂಭವಾಗುವ ಹೊತ್ತಿಗೆ ಹೊಸ ಶಿಕ್ಷಕರು ಶಾಲೆಗಳಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ. ಹಿರಿಯ ಅಧಿಕಾರಿಗಳು ಹಾಗೂ ವಿಧಾನ ಪರಿಷತ್ ಸದಸ್ಯರ ಸಮ್ಮುಖದಲ್ಲಿ ಈ ಸೂಚನೆ ನೀಡಿದ್ದಾರೆ.

Read More
Next Story