
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ದೇವರಹಳ್ಳಿ ಗ್ರಾಮದ ಬಳಿ ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ 20 ವರ್ಷದ ಯುವಕ ಮೃತಪಟ್ಟಿದ್ದಾನೆ.
ಗಣೇಶ ವಿಸರ್ಜನೆಗೆ ತೆರಳಿದ್ದ ಯುವಕ ಕೆರೆಗೆ ಬಿದ್ದು ಸಾವು- ಇಂದು ಮೃತದೇಹ ಪತ್ತೆ
ಭದ್ರಾವತಿ ತಾಲೂಕಿನ ರಂಗನಾಥಪುರದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆಯಲ್ಲಿ ರಾಕೇಶ್ ಭಾಗಿಯಾಗಿದ್ದರು. ಗಣೇಶ ವಿಸರ್ಜನೆ ಸಂದರ್ಭದಲ್ಲಿ ಆಯತಪ್ಪಿ ಕೆರೆಗೆ ಬಿದ್ದ ರಾಕೇಶ್ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ದೇವರಹಳ್ಳಿ ಗ್ರಾಮದ ಬಳಿ ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ 20 ವರ್ಷದ ಯುವಕ ಮೃತಪಟ್ಟಿದ್ದಾನೆ. ಮೃತರನ್ನು ಭದ್ರಾವತಿಯಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ರಾಕೇಶ್ ಎಂದು ಗುರುತಿಸಲಾಗಿದೆ.
ಭದ್ರಾವತಿ ತಾಲೂಕಿನ ರಂಗನಾಥಪುರದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆಯಲ್ಲಿ ರಾಕೇಶ್ ಭಾಗಿಯಾಗಿದ್ದರು. ಭಾನುವಾರ ಸಂಜೆ ಆರಂಭವಾದ ಮೆರವಣಿಗೆ ತಡರಾತ್ರಿ ಸುಮಾರು 1 ಗಂಟೆಗೆ ದೇವರಹಳ್ಳಿ ಕೆರೆ ಬಳಿ ತಲುಪಿತ್ತು. ಗಣೇಶ ವಿಸರ್ಜನೆ ಸಂದರ್ಭದಲ್ಲಿ ಆಯತಪ್ಪಿ ಕೆರೆಗೆ ಬಿದ್ದ ರಾಕೇಶ್ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು.
ರಾತ್ರಿಯಿಡೀ ಶೋಧ ಕಾರ್ಯ
ಘಟನೆ ಬಳಿಕ ಸ್ಥಳೀಯರು ತಕ್ಷಣ ಶೋಧ ಕಾರ್ಯ ಆರಂಭಿಸಿ ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದರು. ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯರು ರಾತ್ರಿಯಿಡೀ ಕೆರೆಯಲ್ಲಿ ಶೋಧ ನಡೆಸಿದರು. ಕೆರೆಯಲ್ಲಿ ಗಿಡಗಂಟಿ ಹಾಗೂ ಹುಲ್ಲು ಹೆಚ್ಚಿದ್ದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು.
ಬೆಳಗ್ಗೆ ಪತ್ತೆಯಾದ ಮೃತದೇಹ
ನಿರಂತರ ಶೋಧದ ಬಳಿಕ ಸೋಮವಾರ ಬೆಳಗ್ಗೆ ರಾಕೇಶ್ ಅವರ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಆಸ್ಪತ್ರೆಗೆ ಕಳುಹಿಸಲಾಗಿದೆ. ಘಟನೆ ಸಂಬಂಧ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

