ಡಿಕೆಶಿ 2 ವರ್ಷ ಅಲ್ಲ, ಹಲವು ವರ್ಷ ಸಿಎಂ ಆಗಿರಲಿ!" ಚನ್ನಗಿರಿ ಶಾಸಕ ಬಸವರಾಜು ಶಿವಗಂಗಾ ಎಕ್ಸ್‌ಕ್ಲೂಸಿವ್ ಇಂಟರ್‌ವ್ಯೂ!

5 Jun 2026 2:53 PM IST

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮೊದಲಿನಿಂದಲೂ ಭವಿಷ್ಯ ನುಡಿಯುತ್ತಾ, ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ಚನ್ನಗಿರಿ ಕ್ಷೇತ್ರದ ಶಾಸಕ ಬಸವರಾಜು ವಿ. ಶಿವಗಂಗಾ ಅವರು ಇದೀಗ ‘ದ ಫೆಡರಲ್ ಕರ್ನಾಟಕ’ಕ್ಕೆ ವಿಶೇಷ ಸಂದರ್ಶನ ನೀಡಿದ್ದಾರೆ. ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ತಮ್ಮ ಸಂತಸವನ್ನು ಹಂಚಿಕೊಂಡಿರುವ ಅವರು, "ನಾನು ಯಾವಾಗಲೂ ಡಿಕೆಶಿ ಸಿಎಂ ಆಗಲಿ ಎನ್ನುತ್ತಿದ್ದೆ, ಈಗ ಆ ಕನಸು ನನಸಾಗಿದೆ" ಎಂದಿದ್ದಾರೆ. ಅಷ್ಟೇ ಅಲ್ಲದೆ, ಡಿ.ಕೆ. ಶಿವಕುಮಾರ್ ಅವರು ಕೇವಲ ಎರಡು ವರ್ಷಗಳ ಕಾಲ ಮಾತ್ರವಲ್ಲ, ಇನ್ನು ಹಲವು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂಬ ತಮ್ಮ ಆಸೆಯನ್ನು ಬಿಚ್ಚಿಟ್ಟಿದ್ದಾರೆ. ಇದೇ ವೇಳೆ ತಮಗೂ ನೂತನ ಸಂಪುಟದಲ್ಲಿ ಸಚಿವ ಸ್ಥಾನ ಸಿಗಬೇಕು ಎಂಬ ಮಹತ್ವಾಕಾಂಕ್ಷೆಯ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಶಾಸಕರ ಈ ಸಂಪೂರ್ಣ ಎಕ್ಸ್‌ಕ್ಲೂಸಿವ್ ಮಾತುಗಳನ್ನು ಈ ವಿಡಿಯೋದಲ್ಲಿ ವೀಕ್ಷಿಸಿ.