Street Vendors Protest | ಬೀದಿಗೆ ಬಿದ್ದ ಬೀದಿ ಬದಿ ವ್ಯಾಪಾರಿಗಳು: ಒಬ್ಬೊಬ್ಬರದ್ದು ಕಣ್ಣೀರಿನ ಕಥೆ
ಬೀದಿ ಬದಿ ವ್ಯಾಪಾರಿಗಳು ಬೀದಿಗೆ ಬೀಳುವಂತಾಗಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ. ಬೀದಿ ಬದಿ ವ್ಯಾಪಾರಿಗಳು ಇಂದು ಸಹಸ್ರಾರು ಸಂಖ್ಯೆಯಲ್ಲಿ ಪ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸಿದರು.

ಪಾದಚಾರಿಗಳಿಗಳ ಸುಗಮ ಸಂಚಾರಕ್ಕೆ ಪುಟ್ ಪಾತ್ ಒತ್ತುವರಿ ತೆರವಿಗೆ ಗ್ರೇಟರ್ ಬೆಂಗಳೂರು ಅಧಿಕಾರಿಗಳು ಕ್ರಮ ವಹಿಸಿದ್ದಾರೆ. ಬೆಂಗಳೂರು ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ (Minister Krishna byregowda) ಅವರು ಪುಟ್ ಪಾತ್ ಒತ್ತುವರಿ ತೆರವಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ. ಆದರೆ ಇದರಿಂದ ಬೀದಿ ಬದಿ ವ್ಯಾಪಾರಿಗಳು ಬೀದಿಗೆ ಬೀಳುವಂತಾಗಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ. ಬೀದಿ ಬದಿ ವ್ಯಾಪಾರಿಗಳು ಇಂದು ಸಹಸ್ರಾರು ಸಂಖ್ಯೆಯಲ್ಲಿ ಪ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸಿದರು. ನಾವು ಬೀದಿ ಬದಿ ಸಣ್ಣ ವ್ಯಾಪಾರ ಮಾಡಿ ಜೀವನ ನಡೆಸುತ್ತಿದ್ದೇವೆ ಈಗ ನಾವು ಎಲ್ಲಿಗೆ ಹೋಗುವುದು ಎಂದು ಸರ್ಕಾರಕ್ಕೆ ಪ್ರಶ್ನೆ ಕೇಳಿದ್ದಾರೆ.ಬೀದಿ ಬದಿ ವ್ಯಾಪಾರಿಗಳು ತಮ್ಮ ಅಳಲನ್ನು ದ ಫೆಡರಲ್ ಕರ್ನಾಟಕ ಜತೆ ತೋಡಿಕೊಂಡಿದ್ದಾರೆ

