LIVE | ಸಿದ್ದರಾಮಯ್ಯ ರಾಜೀನಾಮೆ ಬಿಕ್ಕಟ್ಟು: ಆಪ್ತರ ಆಕ್ರೋಶ | ದೆಹಲಿಯಲ್ಲಿ ಡಿಕೆಶಿ ತಂತ್ರಗಾರಿಕೆ | 5 PM News
ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಬಿರುಗಾಳಿ ಎದ್ದಿದ್ದು, ಕ್ಷಣಕ್ಷಣಕ್ಕೂ ರಾಜಕೀಯ ಹೈಡ್ರಾಮಾ ಮುಂದುವರಿದಿದೆ. ಹೈಕಮಾಂಡ್ ಸೂಚನೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳ ನಡುವೆ, 'ಕಾವೇರಿ' ನಿವಾಸದಲ್ಲಿ ನಡೆದ ಸಭೆಯಲ್ಲಿ ಹಿರಿಯ ನಾಯಕರು ಹಾಗೂ ಆಪ್ತ ಸಚಿವರ ಅಸಮಾಧಾನ ಸ್ಫೋಟಗೊಂಡಿದೆ.

ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಬಿರುಗಾಳಿ ಎದ್ದಿದ್ದು, ಕ್ಷಣಕ್ಷಣಕ್ಕೂ ರಾಜಕೀಯ ಹೈಡ್ರಾಮಾ ಮುಂದುವರಿದಿದೆ. ಹೈಕಮಾಂಡ್ ಸೂಚನೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳ ನಡುವೆ, 'ಕಾವೇರಿ' ನಿವಾಸದಲ್ಲಿ ನಡೆದ ಸಭೆಯಲ್ಲಿ ಹಿರಿಯ ನಾಯಕರು ಹಾಗೂ ಆಪ್ತ ಸಚಿವರ ಅಸಮಾಧಾನ ಸ್ಫೋಟಗೊಂಡಿದೆ. ಶಾಸಕಾಂಗ ಪಕ್ಷದ ಸಭೆ ಕರೆಯದೆ ಏಕಾಏಕಿ ಈ ನಿರ್ಧಾರ ತೆಗೆದುಕೊಂಡಿರುವುದಕ್ಕೆ ಆರ್.ವಿ. ದೇಶಪಾಂಡೆ ಸೇರಿದಂತೆ ಹಲವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ ಮುಂದಿನ ಸಿಎಂ ರೇಸ್‌ನಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲೇ ವಾಸ್ತವ್ಯ ಹೂಡಿ, ಡಿಸಿಎಂ ಹುದ್ದೆಗಳ ಹಂಚಿಕೆ ಸೇರಿದಂತೆ ಮಹತ್ವದ ತಂತ್ರಗಾರಿಕೆ ರೂಪಿಸುತ್ತಿದ್ದಾರೆ. ಇದೆಲ್ಲದರ ನಡುವೆ, ನಿರ್ಗಮನಕ್ಕೂ ಮುನ್ನ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷೆಯ 'ಜಾತಿಗಣತಿ ವರದಿ' ದಿಢೀರ್ ಮುನ್ನೆಲೆಗೆ ಬಂದಿದ್ದು, ರಾಜಕೀಯ ಚದುರಂಗದಾಟ ತೀವ್ರಗೊಂಡಿದೆ. ರಾಜ್ಯ ರಾಜಕಾರಣದ ಈ ಕ್ಷಿಪ್ರ ಬೆಳವಣಿಗೆಗಳ ಸಂಪೂರ್ಣ ವಿಶ್ಲೇಷಣೆ ಇಲ್ಲಿದೆ.

