LIVE | ದರ್ಶನ್ ಜಾಮೀನು ಅರ್ಜಿ ವಿಚಾರಣೆ: ಸುಪ್ರೀಂಕೋರ್ಟ್‌ನಲ್ಲಿ ನಾಳೆ ಏನಾಗಲಿದೆ?

14 May 2026 6:11 PM IST

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್ ಅವರ ಜಾಮೀನು ಭವಿಷ್ಯ ನಾಳೆ (ಶುಕ್ರವಾರ) ನಿರ್ಧಾರವಾಗಲಿದೆ. ಹೈಕೋರ್ಟ್‌ನಲ್ಲಿ ಜಾಮೀನು ನಿರಾಕರಿಸಲ್ಪಟ್ಟ ಹಿನ್ನೆಲೆಯಲ್ಲಿ ದರ್ಶನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ನಾಳೆ ಅರ್ಜಿಯ ವಿಚಾರಣೆ ನಡೆಯಲಿದೆ. ವಿಶೇಷವೆಂದರೆ, ದರ್ಶನ್ ಪರವಾಗಿ ದೇಶದ ಖ್ಯಾತ ಹಿರಿಯ ವಕೀಲ ಮುಕುಲ್ ರೊಹ್ಟೋಗಿ ಅವರು ವಾದ ಮಂಡಿಸಲಿದ್ದಾರೆ. ರೊಹ್ಟೋಗಿ ಅವರ ಎಂಟ್ರಿಯಿಂದ ದರ್ಶನ್ ಅಭಿಮಾನಿಗಳಲ್ಲಿ ಆಸೆ ಚಿಗುರಿದ್ದು, ನಾಳೆ ಸುಪ್ರೀಂಕೋರ್ಟ್ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಇಡೀ ರಾಜ್ಯದ ಕುತೂಹಲಕ್ಕೆ ಕಾರಣವಾಗಿದೆ.