LIVE | ಸಿಎಂ ರೋಡ್‌ಶೋ, ಶಿವಂ ಅಸೋಸಿಯೇಟ್ಸ್‌ ವಂಚನೆಯ ಮಾಹಿತಿ, ಕಸ ವಿಲೇವಾರಿ ಟೆಂಡರ್‌ ಪರಿಶೀಲನೆಗೆ ಸಮಿತಿ

7 Jun 2026 6:52 PM IST

ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಸ್ವಕ್ಷೇತ್ರ ಕನಕಪುರಕ್ಕೆ ಭೇಟಿ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ ನೀಡಿದರು. ಕ್ಷೇತ್ರದ ಜನರಿಗೆ ಕೃತಜ್ನತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್ ಅವರು, ನಾನು ನಿಮ್ಮ ಮನೆ ಮಗ, ನಿಮ್ಮೊಂದಿಗೆ ಸದಾ ಇರುತ್ತೇನೆ ಎನ್ನುವ ಸಂದೇಶ ರವಾನೆ ಮಾಡಿದರು. ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಬರೋಬ್ಬರಿ 4,500 ಕೋಟಿ ರೂಪಾಯಿ ವಂಚನೆ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಆರೋಪಿ ಶಿವಾನಂದ ನೀಲಣ್ಣವರ್ ನಡೆಸುತ್ತಿದ್ದ ಹೂಡಿಕೆ ದಂಧೆಯ ಕರಾಳ ಮುಖಗಳು ಒಂದೊಂದಾಗಿಯೇ ಬಯಲಿಗೆ ಬರುತ್ತಿವೆ. ಮುಂದಿನ 30 ವರ್ಷಗಳ ಅವಧಿಗೆ ಸಿಲಿಕಾನ್ ಸಿಟಿ ಬೆಂಗಳೂರಿನ ಕಸ ನಿರ್ವಹಣೆಯ ಜವಾಬ್ದಾರಿಯನ್ನು ಖಾಸಗಿ ಕಂಪನಿಗೆ ವಹಿಸಲು ಮುಂದಾಗಿದ್ದ ರಾಜ್ಯ ಸರ್ಕಾರದ ಧೋರಣೆಗೆ ಆಕ್ಷೇಪ ವ್ಯಕ್ತವಾದ ಹಿನ್ನೆಲೆ ಈಗ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ.

ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಸ್ವಕ್ಷೇತ್ರ ಕನಕಪುರಕ್ಕೆ ಭೇಟಿ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ ನೀಡಿದರು. ಕ್ಷೇತ್ರದ ಜನರಿಗೆ ಕೃತಜ್ನತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್ ಅವರು, ನಾನು ನಿಮ್ಮ ಮನೆ ಮಗ, ನಿಮ್ಮೊಂದಿಗೆ ಸದಾ ಇರುತ್ತೇನೆ ಎನ್ನುವ ಸಂದೇಶ ರವಾನೆ ಮಾಡಿದರು.

ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಬರೋಬ್ಬರಿ 4,500 ಕೋಟಿ ರೂಪಾಯಿ ವಂಚನೆ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಆರೋಪಿ ಶಿವಾನಂದ ನೀಲಣ್ಣವರ್ ನಡೆಸುತ್ತಿದ್ದ ಹೂಡಿಕೆ ದಂಧೆಯ ಕರಾಳ ಮುಖಗಳು ಒಂದೊಂದಾಗಿಯೇ ಬಯಲಿಗೆ ಬರುತ್ತಿವೆ.

ಮುಂದಿನ 30 ವರ್ಷಗಳ ಅವಧಿಗೆ ಸಿಲಿಕಾನ್ ಸಿಟಿ ಬೆಂಗಳೂರಿನ ಕಸ ನಿರ್ವಹಣೆಯ ಜವಾಬ್ದಾರಿಯನ್ನು ಖಾಸಗಿ ಕಂಪನಿಗೆ ವಹಿಸಲು ಮುಂದಾಗಿದ್ದ ರಾಜ್ಯ ಸರ್ಕಾರದ ಧೋರಣೆಗೆ ಆಕ್ಷೇಪ ವ್ಯಕ್ತವಾದ ಹಿನ್ನೆಲೆ ಈಗ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ.