LIVE|ಶಾಲಾರಂಭದಲ್ಲೇ ಹಿಜಾಬ್-ಕೇಸರಿ ಶಾಲು ವಿವಾದ, ರಾಜ್ಯಸಭೆ ಚುನಾವಣೆಗೆ ಅಧಿಸೂಚನೆ, ಸಂಪುಟ ರಚನೆ ಕಸರತ್ತು
ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ರಾಜ್ಯ ಸರ್ಕಾರ ಅವಕಾಶ ನೀಡಿರುವುದನ್ನು ವಿರೋಧಿಸಿ ಹಿಂದೂಪರ ಸಂಘಟನೆಗಳು ಹೊಸ ಶೈಕ್ಷಣಿಕ ವರ್ಷದ ಮೊದಲ ದಿನವಾದ ಇಂದು (ಜೂನ್ 1) ಪ್ರತಿಭಟನೆಯ ಹಾದಿ ಹಿಡಿದಿವೆ.
ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ರಾಜ್ಯ ಸರ್ಕಾರ ಅವಕಾಶ ನೀಡಿರುವುದನ್ನು ವಿರೋಧಿಸಿ ಹಿಂದೂಪರ ಸಂಘಟನೆಗಳು ಹೊಸ ಶೈಕ್ಷಣಿಕ ವರ್ಷದ ಮೊದಲ ದಿನವಾದ ಇಂದು (ಜೂನ್ 1) ಪ್ರತಿಭಟನೆಯ ಹಾದಿ ಹಿಡಿದಿವೆ. ರಾಜ್ಯಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ಸೇರಿ 10 ರಾಜ್ಯಗಳ 24 ಸ್ಥಾನಗಳಿಗೆ ಚುನಾವಣೆ ಘೋಷಿಸಿದ್ದು, ಸೋಮವಾರ ಈ ಸಂಬಂಧ ಅಧಿಸೂಚನೆ ಪ್ರಕಟಿಸಿದೆ.
ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ಸಂಪುಟ ರಚನೆಗೆ ಕಸರತ್ತು ಆರಂಭವಾಗಿದೆ. ದೆಹಲಿಗೆ ಡಿಕೆಶಿ, ಸಿದ್ದರಾಮಯ್ಯ ಒಟ್ಟಿಗೆ ತೆರಳಿದ್ದು, ಸಮಾಲೋಚನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಮಧ್ಯೆ, ಸಚಿವ ಆಕಾಂಕ್ಷಿಗಳು ದೆಹಲಿಯಲ್ಲೇ ಬೀಡು ಬಿಟ್ಟಿರುವುದು ತೀವ್ರ ಕುತೂಹಲ ಮೂಡಿಸಿದೆ.
Next Story

