LIVE | ಅಸಂಘಟಿತ ಕಾರ್ಮಿಕರಿಗೆ ಕನಿಷ್ಠ ವೇತನ ಹೆಚ್ಚಳ, ಕಪ್ಪೆಚಿಪ್ಪು ತರಲು ಹೋಗಿ ಎಂಟು ಮಂದಿ ನೀರುಪಾಲು

24 May 2026 5:49 PM IST

ಕರ್ನಾಟಕ ಸರ್ಕಾರ 81 ವಿವಿಧ ವಲಯಗಳ ಕಾರ್ಮಿಕರ ಕನಿಷ್ಠ ವೇತನವನ್ನು ಶೇ. 60 ರಷ್ಟು ಹೆಚ್ಚಳ ಮಾಡಿ ಐತಿಹಾಸಿಕ ಆದೇಶ ಹೊರಡಿಸಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿ ಆಗಿರುವ ಘೋರ ದುರಂತವೊಂದು ಇಂದು ನಡೆದಿದೆ. ಅಕ್ರಮ ಹಣ ವರ್ಗಾವಣೆ ಆರೋಪದ ಹೆಸರಿನಲ್ಲಿ ಹೆದರಿಸಿ ಬೆಂಗಳೂರಿನ ಶಿವಾಜಿನಗರದ ವೃದ್ಧೆಯಿಂದ ಬರೋಬ್ಬರಿ 24 ಕೋಟಿ ರೂ. ದೋಚಿದ್ದ, ಇನ್ನಷ್ಟು ಹಣಕ್ಕಾಗಿ ಪೀಡಿಸುತ್ತಿದ್ದ ಐವರು ಅಂತರರಾಜ್ಯ ವಂಚಕರಿಗೆ ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಕರ್ನಾಟಕ ಸರ್ಕಾರ 81 ವಿವಿಧ ವಲಯಗಳ ಕಾರ್ಮಿಕರ ಕನಿಷ್ಠ ವೇತನವನ್ನು ಶೇ. 60 ರಷ್ಟು ಹೆಚ್ಚಳ ಮಾಡಿ ಐತಿಹಾಸಿಕ ಆದೇಶ ಹೊರಡಿಸಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿ ಆಗಿರುವ ಘೋರ ದುರಂತವೊಂದು ಇಂದು ನಡೆದಿದೆ.

ಅಕ್ರಮ ಹಣ ವರ್ಗಾವಣೆ ಆರೋಪದ ಹೆಸರಿನಲ್ಲಿ ಹೆದರಿಸಿ ಬೆಂಗಳೂರಿನ ಶಿವಾಜಿನಗರದ ವೃದ್ಧೆಯಿಂದ ಬರೋಬ್ಬರಿ 24 ಕೋಟಿ ರೂ. ದೋಚಿದ್ದ, ಇನ್ನಷ್ಟು ಹಣಕ್ಕಾಗಿ ಪೀಡಿಸುತ್ತಿದ್ದ ಐವರು ಅಂತರರಾಜ್ಯ ವಂಚಕರಿಗೆ ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.