LIVE | ಕೆಪಿಸಿಸಿ ಅಧ್ಯಕ್ಷ , ಸಚಿವ ಸ್ಥಾನಕ್ಕೆ ಹೆಚ್ಚಿದ ಲಾಬಿ, ಕರಾಳ ಭಾನುವಾರ ಹತ್ತು‌ ಮಂದಿ ಸಾವು,IPLಫೈನಲ್ ಹವಾ

31 May 2026 5:23 PM IST

ಸಿಎಂ ಕುರ್ಚಿನ ಕದನ ಮುಗಿದ ಬೆನ್ನಲ್ಲೇ ಸಚಿವ ಸಂಪುಟ ರಚನೆಗೆ ಕಸರತ್ತು ಆರಂಭವಾಗಿದೆ. ಹೊಸ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಶಾಸಕರಲ್ಲಿ ಲಾಬಿ ಜೋರಾಗಿದೆ. ಈ ಮಧ್ಯೆ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ಹೈಕಮಾಂಡ್‌ ತಲಾಶ್‌ ಆರಂಭಿಸಿದೆ. ರಾಜ್ಯದ ವಿವಿಧೆಡೆ ನಡೆದ ಪ್ರತ್ಯೇಕ ದುರಂತಗಳಲ್ಲಿ ಒಟ್ಟು ಹತ್ತು ಮಂದಿ ಜೀವ ಕಳೆದುಕೊಂಡಿದ್ದಾರೆ. ಮಂತ್ರಾಲಯದಲ್ಲಿ ಐವರು ನೀರಿನಲ್ಲಿ ಮುಳುಗಿ ಮೃತಪಟ್ಟರೆ, ಬಾಗೇಪಲ್ಲಿಯಲ್ಲಿ ನಡೆದ ಸರಣಿ ಅಪಘಾತದಲ್ಲಿ ಐವರು ದುರ್ಮರಣ ಹೊಂದಿದ್ದಾರೆ. ಈ ನಡುವೆ, ಭಾನುವಾರ ಸಂಜೆ ಆರ್‌ಸಿಬಿ ಹಾಗೂ ಗುಜರಾತ್‌ ಟೈಟನ್‌ ನಡುವೆ ನಡೆಯುವ ಐಪಿಎಲ್‌ ಫೈನಲ್‌ ಪಂದ್ಯ ತೀವ್ರ ಕುತೂಹಲ ಕೆರಳಿಸಿದೆ. ಯಾರೇ ಗೆದ್ದರೂ, ಸೋತರೂ ಅಭಿಮಾನಿಗಳು ಸಂಯಮದಿಂದ ವರ್ತಿಸುವಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಎಚ್ಚರಿಕೆ ನೀಡಿದ್ದಾರೆ.