LIVE |ಡಿಕೆಶಿ ಆಟ ಹೆಚ್ಚು ದಿನ ನಡೆಯಲ್ಲ: 'SIR' ಲೋಪದ ಬಗ್ಗೆ ಸ್ಫೋಟಕ ವಿಡಿಯೋ ಬಿಡುಗಡೆ ಮಾಡಿದ ಎಚ್.ಡಿ. ಕುಮಾರಸ್ವಾಮಿ

3 July 2026 4:34 PM IST

ಕೇಂದ್ರ ಸಚಿವ ಎಚ್.ಡಿ.‌ ಕುಮಾರಸ್ವಾಮಿ ಮತ್ತೊಂದು ಸ್ಫೋಟಕ ವಿಡಿಯೋ ಬಿಡುಗಡೆ ಮಾಡುವ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್ ಕಚೇರಿಯಲ್ಲಿಂದು ನಡೆದ ಮಹತ್ವದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ (SIR) ನಡೆದಿರುವ ಬೃಹತ್ ಲೋಪಗಳನ್ನು ವಿಡಿಯೋ ಸಾಕ್ಷ್ಯದೊಂದಿಗೆ ಎಳೆಎಳೆಯಾಗಿ ಬಿಚ್ಚಿಟ್ಟರು. "ಡಿಕೆಶಿ ಆಟ ಹೆಚ್ಚು ದಿನ ನಡೆಯಲ್ಲ" ಎಂದು ನೇರ ಎಚ್ಚರಿಕೆ ನೀಡಿದ ಹೆಚ್‌ಡಿಕೆ, ಇದೇ ವೇಳೆ ವಿವಾದಾತ್ಮಕ ಬಿಡದಿ ಟೌನ್ ಶಿಪ್ ಯೋಜನೆ ಸೇರಿದಂತೆ ರಾಜ್ಯದ ಹಲವು ಪ್ರಮುಖ ವಿಚಾರಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವರ ಪತ್ರಿಕಾಗೋಷ್ಠಿಯ ಸಂಪೂರ್ಣ ವಿವರ ಈ ವಿಡಿಯೋದಲ್ಲಿದೆ.