ಬಿಡದಿ ಭೂಸ್ವಾಧೀನ ವಿವಾದ: ರೈತರ ಸಿಟ್ಟು ಕಾಂಗ್ರೆಸ್‌ಗೆ ಎಚ್ಚರಿಕೆ ಗಂಟೆಯಾ? ಮುಂದೇನಾಗಲಿದೆ?

16 Jun 2026 8:30 PM IST

ಬಿಡದಿ ಟೌನ್‌ಶಿಪ್ (Bidadi Township) ಯೋಜನೆಗೆ ಸಂಬಂಧಿಸಿದ ಭೂಸ್ವಾಧೀನ ವಿವಾದ ಇದೀಗ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ ರೈತರ ಆಕ್ರೋಶ ಭುಗಿಲೆದ್ದಿದ್ದು, ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿವೆ. ಮತ್ತೊಂದೆಡೆ, ಈ ಯೋಜನೆಯ ಮೂಲ ಪರಿಕಲ್ಪನೆ ಹಾಗೂ ಭೂಸ್ವಾಧೀನ ಪ್ರಕ್ರಿಯೆಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕಾರಣ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಆದರೆ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಇದನ್ನು ತಳ್ಳಿಹಾಕಿದ್ದು, ಸರ್ಕಾರದ ಮೇಲೆಯೇ ಹೊಣೆ ಹೊರಿಸಲು ಯತ್ನಿಸುತ್ತಿದ್ದಾರೆ. ರೈತರು ಏಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ? ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಏನು ನಡೆದಿದೆ? ಸರ್ಕಾರದ ವಾದವೇನು? ಪ್ರತಿಪಕ್ಷಗಳ ಆರೋಪಗಳೇನು? ಈ ಹೋರಾಟ ಕಾಂಗ್ರೆಸ್ ಸರ್ಕಾರಕ್ಕೆ ರಾಜಕೀಯವಾಗಿ ಎಚ್ಚರಿಕೆ ಗಂಟೆಯಾಗಬಹುದೇ? ಮತ್ತು ಮುಂದಿನ ದಿನಗಳಲ್ಲಿ ಈ ವಿವಾದ ಯಾವ ದಿಕ್ಕು ಪಡೆಯಲಿದೆ? ಈ ಎಲ್ಲ ಪ್ರಶ್ನೆಗಳಿಗೆ ಸಮಗ್ರ ವಿಶ್ಲೇಷಣೆಯೊಂದಿಗೆ ಉತ್ತರ ಹುಡುಕುವ ಪ್ರಯತ್ನವನ್ನು ಈ ವಿಡಿಯೊದಲ್ಲಿ ಮಾಡಿದ್ದೇವೆ