x

ಕಾವೇರಿ ಕಿಚ್ಚು ಭುಗಿಲು: ಆಗಸ್ಟ್ 13ಕ್ಕೆ ಕರ್ನಾಟಕ ಬಂದ್! ತಮಿಳುನಾಡು ಸಿಎಂ ಬಂದರೆ ಏರ್‌ಪೋರ್ಟ್‌ಗೆ ಮುತ್ತಿಗೆ

31 July 2026 7:18 PM IST

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ನೀಡಿರುವ ಆದೇಶದ ವಿರುದ್ಧ ಕರ್ನಾಟಕದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆಗಳು ಆಗಸ್ಟ್ 13ರಂದು ರಾಜ್ಯವ್ಯಾಪಿ ಕರ್ನಾಟಕ ಬಂದ್​ಗೆ ಕರೆ ನೀಡಿವೆ. ವಾಟಾಳ್ ನಾಗರಾಜ್, ಸಾ.ರಾ. ಗೋವಿಂದು ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಂದ್ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಇದೇ ವೇಳೆ, ತಮಿಳುನಾಡು ಮುಖ್ಯಮಂತ್ರಿ ಜೊಸೆಫ್ ವಿಜಯ್ ಅವರು ಕರ್ನಾಟಕಕ್ಕೆ ಭೇಟಿ ನೀಡಿದರೆ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆಯನ್ನೂ ಕನ್ನಡಪರ ಹೋರಾಟಗಾರರು ನೀಡಿದ್ದಾರೆ. The Federal Karnataka ಜೊತೆಗೆ ಮಾತನಾಡಿರುವ ಕನ್ನಡಪರ ಹೋರಾಟಗಾರರು, ಕಾವೇರಿ ನೀರು ವಿವಾದ, ಆಗಸ್ಟ್ 13ರ ಕರ್ನಾಟಕ ಬಂದ್, ಸರ್ಕಾರದ ವಿರುದ್ಧದ ಆಕ್ರೋಶ ಹಾಗೂ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.