LIVE |KPCC ಅಧ್ಯಕ್ಷರಾಗಿ BKH ಪದಗ್ರಹಣ, ಬಿಡದಿಗೆ ಜೆಡಿಎಸ್ ಪಾದಯಾತ್ರೆ, ಧರ್ಮಸ್ಥಳದಲ್ಲಿ ಬಿಜೆಪಿ ಆಣೆ ಪ್ರಮಾಣ
ಪಿಸಿಸಿ ನೂತನ ಸಾರಥಿಯಾಗಿ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರು ಭಾನುವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿದರು. ಬಿಡದಿ ಭೂಸ್ವಾಧೀನ ವಿರೋಧಿಸಿ ಜೆಡಿಎಸ್ ಹಾಗೂ ರೈತ ಸಂಘಟನೆಗಳು ಭಾನುವಾರ ಆಯೋಜಿಸಿದ್ದ ಪಾದಯಾತ್ರೆ ಹೈಡ್ರಾಮಕ್ಕೆ ಸಾಕ್ಷಿಯಾಯಿತು. ಪಾದಯಾತ್ರೆ ಅಂಚಿಪುರ ಕಾಲೊನಿಗೆ ಬಂದಾಗ ಹಲವು ರೈತರು ನಾವು ಜಮೀನು ಕೊಡಲು ಸಿದ್ಧರಿದ್ದೇವೆ ಎಂದು ನೇರವಾಗಿಯೇ ನಿಖಿಲ್ ಕುಮಾರಸ್ವಾಮಿ ಎದುರು ಹೇಳಿದರು. ವಿಧಾನ ಪರಿಷತ್ನ ಏಳು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮೈತ್ರಿಪಕ್ಷಗಳಿಗೆ ಶಾಕ್ ಕೊಟ್ಟು, ಕಾಂಗ್ರೆಸ್ ಪರ ಅಡ್ಡಮತದಾನ ಮಾಡಿದ ಶಾಸಕರ ಪತ್ತೆಗಾಗಿ ರಾಜ್ಯ ಬಿಜೆಪಿ ಈಗ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿಸಲು ಮುಂದಾಗಿದೆ.

ಪಿಸಿಸಿ ನೂತನ ಸಾರಥಿಯಾಗಿ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರು ಭಾನುವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿದರು.
ಬಿಡದಿ ಭೂಸ್ವಾಧೀನ ವಿರೋಧಿಸಿ ಜೆಡಿಎಸ್ ಹಾಗೂ ರೈತ ಸಂಘಟನೆಗಳು ಭಾನುವಾರ ಆಯೋಜಿಸಿದ್ದ ಪಾದಯಾತ್ರೆ ಹೈಡ್ರಾಮಕ್ಕೆ ಸಾಕ್ಷಿಯಾಯಿತು. ಪಾದಯಾತ್ರೆ ಅಂಚಿಪುರ ಕಾಲೊನಿಗೆ ಬಂದಾಗ ಹಲವು ರೈತರು ನಾವು ಜಮೀನು ಕೊಡಲು ಸಿದ್ಧರಿದ್ದೇವೆ ಎಂದು ನೇರವಾಗಿಯೇ ನಿಖಿಲ್ ಕುಮಾರಸ್ವಾಮಿ ಎದುರು ಹೇಳಿದರು.
ವಿಧಾನ ಪರಿಷತ್ನ ಏಳು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮೈತ್ರಿಪಕ್ಷಗಳಿಗೆ ಶಾಕ್ ಕೊಟ್ಟು, ಕಾಂಗ್ರೆಸ್ ಪರ ಅಡ್ಡಮತದಾನ ಮಾಡಿದ ಶಾಸಕರ ಪತ್ತೆಗಾಗಿ ರಾಜ್ಯ ಬಿಜೆಪಿ ಈಗ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿಸಲು ಮುಂದಾಗಿದೆ.

