LIVE | ಬಿಜೆಪಿಯಲ್ಲಿ ಆಡಿಯೋ ಬಾಂಬ್, ನಾಳೆಯಿಂದ ರಾಜ್ಯಾದ್ಯಂತ SIR ಪ್ರಕ್ರಿಯೆ, ಅನುದಾನ ಹಂಚಿಕೆಯಲ್ಲಿ ತಾರತಮ್ಯ?

29 Jun 2026 5:35 PM IST

ಕರ್ನಾಟಕ ರಾಜಕೀಯದಲ್ಲಿ ಇಂದು ಮೂರು ದೊಡ್ಡ ಬೆಳವಣಿಗೆಗಳು ಭಾರೀ ಚರ್ಚೆಗೆ ಗ್ರಾಸವಾಗಿವೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಕೆಳಗಿಳಿಸುವ ಪಿತೂರಿ ನಡೆದಿದೆ ಎನ್ನಲಾದ ವೈರಲ್ ಆಡಿಯೋ ರಾಜ್ಯ ಬಿಜೆಪಿಯಲ್ಲಿ ಹೊಸ ಸಂಚಲನ ಮೂಡಿಸಿದೆ. ಇನ್ನೊಂದೆಡೆ, ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭವಾಗಿದ್ದು, ಬಿಎಲ್‌ಒಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಅದೇ ವೇಳೆ, ಕಾಂಗ್ರೆಸ್ ಸರ್ಕಾರವು ತನ್ನ ಪಕ್ಷದ ಶಾಸಕರ ಕ್ಷೇತ್ರಗಳಿಗೆ ಮಾತ್ರ ಹೆಚ್ಚಿನ ಅನುದಾನ ನೀಡುತ್ತಿದ್ದು, ಬಿಜೆಪಿ ಮತ್ತು ಜೆಡಿಎಸ್ ಕ್ಷೇತ್ರಗಳನ್ನು ಕಡೆಗಣಿಸುತ್ತಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಈ ಆರೋಪಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ತಿರುಗೇಟು ನೀಡಿದ್ದಾರೆ.

ಕರ್ನಾಟಕ ರಾಜಕೀಯದಲ್ಲಿ ಇಂದು ಮೂರು ದೊಡ್ಡ ಬೆಳವಣಿಗೆಗಳು ಭಾರೀ ಚರ್ಚೆಗೆ ಗ್ರಾಸವಾಗಿವೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಕೆಳಗಿಳಿಸುವ ಪಿತೂರಿ ನಡೆದಿದೆ ಎನ್ನಲಾದ ವೈರಲ್ ಆಡಿಯೋ ರಾಜ್ಯ ಬಿಜೆಪಿಯಲ್ಲಿ ಹೊಸ ಸಂಚಲನ ಮೂಡಿಸಿದೆ.

ಇನ್ನೊಂದೆಡೆ, ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭವಾಗಿದ್ದು, ಬಿಎಲ್‌ಒಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ.

ಅದೇ ವೇಳೆ, ಕಾಂಗ್ರೆಸ್ ಸರ್ಕಾರವು ತನ್ನ ಪಕ್ಷದ ಶಾಸಕರ ಕ್ಷೇತ್ರಗಳಿಗೆ ಮಾತ್ರ ಹೆಚ್ಚಿನ ಅನುದಾನ ನೀಡುತ್ತಿದ್ದು, ಬಿಜೆಪಿ ಮತ್ತು ಜೆಡಿಎಸ್ ಕ್ಷೇತ್ರಗಳನ್ನು ಕಡೆಗಣಿಸುತ್ತಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಈ ಆರೋಪಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ತಿರುಗೇಟು ನೀಡಿದ್ದಾರೆ.