LIVE | ಸಿಎಂ ಸಿದ್ದರಾಮಯ್ಯ ನಾಳೆ ದೆಹಲಿಗೆ, ನಾಗಮಂಗಲದಲ್ಲಿ 1000 ಎಕರೆ ಭೂ ಅಕ್ರಮ ಬಯಲು, ಮತ್ತೆ ಮೇಕೆದಾಟು ಸದ್ದು
ನಾಯಕತ್ವ ಚರ್ಚೆ ಬೆನ್ನಲ್ಲೇ ನಾಳೆ ದೆಹಲಿಗೆ ರಾಜ್ಯ ರಾಜಕಾರಣ ಶಿಫ್ಟ್ ಆಗಿದೆ. ಸಿಎಂ, ಡಿಸಿಎಂ ಇಬ್ಬರಿಗೂ ಹೈಕಮಾಂಡ್ ಬುಲಾವ್ ಬಂದಿದ್ದು, ತೀವ್ರ ಕುತೂಹಲ ಮೂಡಿಸಿದೆ. ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ 100೦ ಎಕರೆಯ ಬಗರ್‌ಹುಕುಂ ಭೂ ಮಂಜೂರಾತಿ ಹಗರಣ ಬಯಲಿಗೆ ಬಂದಿದೆ. ಕಂದಾಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಶಾಮೀಲಾಗಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ. ಮೇಕೆದಾಟು ಯೋಜನೆಗೆ ಕರ್ನಾಟಕ ಸಿದ್ಧತೆ ನಡೆಸಿರುವ ಬೆನ್ನಲ್ಲೇ ತಮಿಳುನಾಡು ಸಿಎಂ ವಿಜಯ್ ಅವರು ಕೇಂದ್ರ ಜಲ ಆಯೋಗದ ಅಧಿಕಾರಿಗಳು ಹಾಗೂ ಕಾನೂನು ತಜ್ಞರ ಜತೆ ಮಹತ್ವದ ಸಭೆ ನಡೆಸಿದ್ದಾರೆ.

ನಾಯಕತ್ವ ಚರ್ಚೆ ಬೆನ್ನಲ್ಲೇ ನಾಳೆ ದೆಹಲಿಗೆ ರಾಜ್ಯ ರಾಜಕಾರಣ ಶಿಫ್ಟ್ ಆಗಿದೆ. ಸಿಎಂ, ಡಿಸಿಎಂ ಇಬ್ಬರಿಗೂ ಹೈಕಮಾಂಡ್ ಬುಲಾವ್ ಬಂದಿದ್ದು, ತೀವ್ರ ಕುತೂಹಲ ಮೂಡಿಸಿದೆ. ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ 100೦ ಎಕರೆಯ ಬಗರ್‌ಹುಕುಂ ಭೂ ಮಂಜೂರಾತಿ ಹಗರಣ ಬಯಲಿಗೆ ಬಂದಿದೆ.
ಕಂದಾಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಶಾಮೀಲಾಗಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.
ಮೇಕೆದಾಟು ಯೋಜನೆಗೆ ಕರ್ನಾಟಕ ಸಿದ್ಧತೆ ನಡೆಸಿರುವ ಬೆನ್ನಲ್ಲೇ ತಮಿಳುನಾಡು ಸಿಎಂ ವಿಜಯ್ ಅವರು ಕೇಂದ್ರ ಜಲ ಆಯೋಗದ ಅಧಿಕಾರಿಗಳು ಹಾಗೂ ಕಾನೂನು ತಜ್ಞರ ಜತೆ ಮಹತ್ವದ ಸಭೆ ನಡೆಸಿದ್ದಾರೆ.

