LIVE |ವಿಧಾನ ಪರಿಷತ್ ಚುನಾವಣೆಗೆ ಬಿಗ್ ಟ್ವಿಸ್ಟ್, ಸಚಿವ ಗಾದಿಗೆ ʼಕೈʼ ಪಾಳಯದಲ್ಲಿ ಲಾಬಿ, ರೌಡಿ ನಿಗ್ರಹ ಪಡೆ ರಚನೆ
ವಿಧಾನ ಪರಿಷತ್ NDAಅಭ್ಯರ್ಥಿ ಗೋವಿಂದರಾಜು ಗೆಲುವಿಗೆ ಸುಮಾರು 4 ರಿಂದ 5 ಹೆಚ್ಚುವರಿ ಮತಗಳ ಕೊರತೆ ಎದುರಾಗಲಿದೆ. ಈ ಕೊರತೆ ನೀಗಿಸಲು ಜೆಡಿಎಸ್ ಮತ್ತು ಬಿಜೆಪಿ ನಾಯಕರು ಕಸರತ್ತು ನಡೆಸುತ್ತಿದ್ದಾರೆ
ವಿಧಾನ ಪರಿಷತ್ NDAಅಭ್ಯರ್ಥಿ ಗೋವಿಂದರಾಜು ಗೆಲುವಿಗೆ ಸುಮಾರು 4 ರಿಂದ 5 ಹೆಚ್ಚುವರಿ ಮತಗಳ ಕೊರತೆ ಎದುರಾಗಲಿದೆ. ಈ ಕೊರತೆ ನೀಗಿಸಲು ಜೆಡಿಎಸ್ ಮತ್ತು ಬಿಜೆಪಿ ನಾಯಕರು ಕಸರತ್ತು ನಡೆಸುತ್ತಿದ್ದಾರೆ. ಈ ಮಧ್ಯೆ, ಕಾಂಗ್ರೆಸ್ ಶಾಸಕರನ್ನು ತಮ್ಮತ್ತ ಸೆಳೆಯುವ ಪ್ರಯತ್ನಗಳು ತೆರೆಮರೆಯಲ್ಲಿ ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು ಅಭಿವೃದ್ಧಿ ಖಾತೆಯೊಳಗೆ ಬಿಡಿಎ ಹಾಗೂ ಬಿಎಂಆರ್ಡಿಎ ಸೇರಿಸಬೇಕು. ಇಲ್ಲವಾದಲ್ಲಿ ಬೆಂಗಳೂರು ಅಭಿವೃದ್ಧಿ ಖಾತೆಗೆ ಯಾವುದೇ ಬೆಲೆ ಇರುವುದಿಲ್ಲ. ಹಾಗಾಗಿ, ಈ ಎರಡೂ ಪ್ರಾಧಿಕಾರಗಳನ್ನು ಸೇರಿಸದ ಹೊರತು ಅಧಿಕಾರ ಸ್ವೀಕರಿಸುವುದಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಅವರನ್ನು ಸುರ್ಕೇವಾಲಾ ಹಾಗೂ ಡಿ.ಕೆ. ಶಿವಕುಮಾರ್ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದಾರೆ.
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಕಠಿಣ ನಿರ್ಧಾರವೊಂದನ್ನು ಕೈಗೊಂಡಿದೆ. ಸಮಾಜಘಾತುಕ ಶಕ್ತಿಗಳು, ರೌಡಿಗಳು ಮತ್ತು ಅಪರಾಧ ಗುಂಪುಗಳ ಹಾವಳಿಯನ್ನು ಸಂಪೂರ್ಣವಾಗಿ ನಿಯಂತ್ರಿಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಅವರು ರಾಜ್ಯಾದ್ಯಂತ ರೌಡಿ ನಿಗ್ರಹ ದಳ ರಚನೆಗೆ ಅಧಿಕೃತವಾಗಿ ಆದೇಶ ಹೊರಡಿಸಿದ್ದಾರೆ.

