x

LIVE | BJP-JDS ವಿರುದ್ಧ ಖರ್ಗೆ ಕಿಡಿ, ಸರ್ಕಾರದ ವಿರುದ್ಧ ವ್ಯಾಪಾರಿಗಳ ಸಮರ, ಖಾಕಿಗೆ ಎಚ್ಚರಿಕೆ ಗಂಟೆ

8 July 2026 6:25 PM IST  ( Updated:2026-07-08 13:05:10  )

ಎಸ್‌ಐಆರ್ ಪ್ರಕ್ರಿಯೆ ಸಂಬಂಧ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾಗುತ್ತಿದೆ ಮತ್ತು ನಿಯಮಬಾಹಿರವಾಗಿ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂಬ ಬಿಜೆಪಿ-ಜೆಡಿಎಸ್ ಆರೋಪಗಳಿಗೆ ಮುಖ್ಯ ಚುನಾವಣಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ನಗರದ ಸೌಂದರ್ಯೀಕರಣ ಮತ್ತು ಪಾದಚಾರಿಗಳ ಸುರಕ್ಷತೆಗಾಗಿ ಸರ್ಕಾರ ಕಠಿಣ ನಿರ್ಧಾರ ಕೈಗೊಂಡಿದೆ. ಆದರೆ, ಈ ಕಾರ್ಯಾಚರಣೆಯು ಬೀದಿಬದಿ ವ್ಯಾಪಾರಿಗಳು ಕಂಗಾಲಾಗಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ ಜಮಾಯಿಸಿದ ನೂರಾರು ವ್ಯಾಪಾರಿಗಳು, ನಮಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಎತ್ತಂಗಡಿ ಮಾಡುವುದು ಅನ್ಯಾಯ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಕಲಬುರಗಿಯಲ್ಲಿ ನಡೆದ ಘಟನೆ ಇಡೀ ಪೊಲೀಸ್ ಇಲಾಖೆಯನ್ನು ಬೆಚ್ಚಿಬೀಳಿಸಿದೆ. ಸಶಸ್ತ್ರ ಮೀಸಲು ಪಡೆಯ ಕಾನ್ಸ್‌ಟೇಬಲ್ ಶಿವಕುಮಾರ ನರಿಬೋಳ ಅವರು ತಮ್ಮದೇ ಸೇವಾ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾರೆ. ಇದು ಕೇವಲ ಒಂದು ಆತ್ಮಹತ್ಯೆಯಲ್ಲ, ಬದಲಾಗಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಪ್ರತಿನಿತ್ಯ ಅನುಭವಿಸುತ್ತಿರುವ ಅತೀವ ಮಾನಸಿಕ ಒತ್ತಡದ ದಾರುಣ ಫಲಿತಾಂಶವಾಗಿದೆ.