LIVE | ರಾಜ್ಯಸಭೆ ಟಿಕೆಟ್ ಮಿಸ್ ಆದರೂ ಬೇಸರವಿಲ್ಲ- ಕಸ ಟೆಂಡರ್‌ನಲ್ಲೂ ಹಗರಣ, ಕಾಂಗ್ರೆಸ್‌ನಲ್ಲಿ ಖಾತೆ ಕದನ!
ರಾಜ್ಯಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ನೀಡಿರುವ ಖಡಕ್ ಪ್ರತಿಕ್ರಿಯೆ ಈಗ ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ರಾಜ್ಯಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ನೀಡಿರುವ ಖಡಕ್ ಪ್ರತಿಕ್ರಿಯೆ ಈಗ ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ಯೋಜನೆಗೆ ಸಂಬಂಧಿಸಿದ 39 ಸಾವಿರ ಕೋಟಿ ರೂಪಾಯಿ ಟೆಂಡರ್ ಇದೀಗ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಪ್ರತಿಪಕ್ಷ ನಾಯಕ ಆರ್. ಅಶೋಕ್, ಕಸದ ಹೆಸರಿನಲ್ಲಿ ಭಾರೀ ಹಗರಣ ನಡೆದಿದ್ದು 10 ಸಾವಿರ ಕೋಟಿ ರೂಪಾಯಿ ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ಎರಡನೇ ಇನ್ನಿಂಗ್ಸ್ ಆರಂಭವಾದ ಬೆನ್ನಲ್ಲೇ ಸಚಿವರ ಖಾತೆ ಹಂಚಿಕೆ ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಕೆ.ಎಚ್. ಮುನಿಯಪ್ಪ ಅಸಮಾಧಾನ, ಜಿ. ಪರಮೇಶ್ವರ್ ಅವರ ಆಸಕ್ತಿ, ಕೃಷ್ಣ ಬೈರೇಗೌಡರ ಷರತ್ತು ಹಾಗೂ ಸಚಿವ ಸ್ಥಾನದ ಆಕಾಂಕ್ಷಿಗಳ ದೆಹಲಿ ಲಾಬಿ ನಡುವೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ
Next Story

