LIVE | ಮೈಸೂರಿಗೆ ರಾಹುಲ್ ಗಾಂಧಿ ಆಗಮನ; ಹಲವು ಪ್ರಶ್ನೆಗಳಿಗೆ ಸಿಎಂ ಉತ್ತರ!

13 Jan 2026 4:31 PM IST

ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ತಮಿಳುನಾಡಿಗೆ ತೆರಳುವ ಮಾರ್ಗಮಧ್ಯೆ ದೆಹಲಿಯಿಂದ ಮೈಸೂರಿನ ವಿಶೇಷ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯ ಕಾಂಗ್ರೆಸ್‌ನ ಪ್ರಮುಖ ನಾಯಕರು ರಾಹುಲ್ ಗಾಂಧಿಯವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ರಾಹುಲ್ ಗಾಂಧಿ ಅವರ ಈ ಭೇಟಿಯು ರಾಜ್ಯ ರಾಜಕಾರಣದಲ್ಲಿ ಹಲವು ಕುತೂಹಲಗಳಿಗೆ ಕಾರಣವಾಗಿದ್ದು, ನಾಯಕತ್ವ ಬದಲಾವಣೆ ಹಾಗೂ ಹೈಕಮಾಂಡ್ ಸೂಚನೆಗಳ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಮುಕ್ತವಾಗಿ ಉತ್ತರಿಸಿದ್ದಾರೆ. ಈ ವಿಡಿಯೋದಲ್ಲಿ ಯಾವುದೇ ರಾಜಕೀಯ ಚರ್ಚೆಯಾಗಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ.