LIVE | ರಾಹುಲ್​ಗೆ ತಲೆ ಬಿಸಿ ತಂದ ಖಾತೆ ಕಿತ್ತಾಟ, ಡಿಕೆಶಿ ವಿರುದ್ಧ ಕೆಎನ್ಆರ್ ಕಿಡಿ, ರಾಜ್ಯಸಭೆಗೆ ಖರ್ಗೆ ನಾಮಪತ್ರ

5 Jun 2026 5:05 PM IST

ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಖಾತೆ ಹಂಚಿಕೆ ಕಗ್ಗಂಟಿನ ಬಿಸಿ ಹೈಕಮಾಂಡ್ ನಾಯಕರಾದ ರಾಹುಲ್ ಗಾಂಧಿ ಅವರಿಗೂ ತಟ್ಟಿದೆ. ಇದರಿಂದ ಮುಜುಗರಕ್ಕೆ ಒಳಗಾಗಿರುವ ರಾಹುಲ್ ಅವರು ಕೂಡಲೇ ಅಸಮಧಾನಿತರ ಜೊತೆ ಮಾತುಕತೆ ನಡೆಸಿ, ಬಿಕ್ಕಟ್ಟು ಬಗೆಹರಿಸುವಂತೆ ರಾಜ್ಯ ನಾಯಕರಿಗೆ ಸೂಚಿಸಿದ್ದಾರೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೂರೇ ದಿನದಲ್ಲಿ ಆಂತರಿಕ ಭಿನ್ನಮತ ಸ್ಫೋಟಿಸಿರುವುದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಸಿದ್ದರಾಮಯ್ಯ ಬೆಂಬಲಿಗರು ಖಾತೆ ಹಂಚಿಕೆ ಕ್ಯಾತೆ ತೆಗೆದಿದ್ದು, ಈ ಮಧ್ಯೆ, ಸಿಎಂ ಆಪ್ತ ಕೆ.ಎನ್. ರಾಜಣ್ಣ ಅವರು ಡಿಕೆಶಿ ವಿರುದ್ಧ ಕಿಡಿಕಾರಿದ್ದಾರೆ. ಕರ್ನಾಟಕದಿಂದ ಮೂರು ರಾಜ್ಯಸಭೆ ಸ್ಥಾನಗಳಿಗೆ ಶುಕ್ರವಾರ ಕಾಂಗ್ರೆಸ್ ನಾಯಕರು ನಾಮಪತ್ರ ಸಲ್ಲಿಕೆ ಮಾಡಿದರು. ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಹಾಗೂ ಮನ್ಸೂರ್ ಅಲಿಖಾನ್ ಅವರು ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಿದರು.

ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಖಾತೆ ಹಂಚಿಕೆ ಕಗ್ಗಂಟಿನ ಬಿಸಿ ಹೈಕಮಾಂಡ್ ನಾಯಕರಾದ ರಾಹುಲ್ ಗಾಂಧಿ ಅವರಿಗೂ ತಟ್ಟಿದೆ. ಇದರಿಂದ ಮುಜುಗರಕ್ಕೆ ಒಳಗಾಗಿರುವ ರಾಹುಲ್ ಅವರು ಕೂಡಲೇ ಅಸಮಧಾನಿತರ ಜೊತೆ ಮಾತುಕತೆ ನಡೆಸಿ, ಬಿಕ್ಕಟ್ಟು ಬಗೆಹರಿಸುವಂತೆ ರಾಜ್ಯ ನಾಯಕರಿಗೆ ಸೂಚಿಸಿದ್ದಾರೆ.

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೂರೇ ದಿನದಲ್ಲಿ ಆಂತರಿಕ ಭಿನ್ನಮತ ಸ್ಫೋಟಿಸಿರುವುದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಸಿದ್ದರಾಮಯ್ಯ ಬೆಂಬಲಿಗರು ಖಾತೆ ಹಂಚಿಕೆ ಕ್ಯಾತೆ ತೆಗೆದಿದ್ದು, ಈ ಮಧ್ಯೆ, ಸಿಎಂ ಆಪ್ತ ಕೆ.ಎನ್. ರಾಜಣ್ಣ ಅವರು ಡಿಕೆಶಿ ವಿರುದ್ಧ ಕಿಡಿಕಾರಿದ್ದಾರೆ. ಕರ್ನಾಟಕದಿಂದ ಮೂರು ರಾಜ್ಯಸಭೆ ಸ್ಥಾನಗಳಿಗೆ ಶುಕ್ರವಾರ ಕಾಂಗ್ರೆಸ್ ನಾಯಕರು ನಾಮಪತ್ರ ಸಲ್ಲಿಕೆ ಮಾಡಿದರು. ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಹಾಗೂ ಮನ್ಸೂರ್ ಅಲಿಖಾನ್ ಅವರು ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಿದರು.