LIVE | ಸಚಿವರ ಸಭೆಯಲ್ಲಿ ಸಿದ್ದರಾಮಯ್ಯ ರಾಜೀನಾಮೆ ಪ್ರಕಟ: ಭಾವುಕರಾದ ಸಚಿವರು ಕಾಲಿಗೆ ಬಿದ್ದ ಡಿಕೆಶಿ

28 May 2026 12:30 PM IST  ( Updated:2026-05-28 07:12:00  )

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರ ಸಭೆಯಲ್ಲಿ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ತೀರ್ಮಾನ ಕೈಗೊಂಡಿರುವುದಾಗಿ ಅವರು ಸಚಿವರಿಗೆ ತಿಳಿಸಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಲಿದ್ದಾರೆ. ಕಾವೇರಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, “ಹೈಕಮಾಂಡ್ ತೀರ್ಮಾನದಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಈವರೆಗೆ ನನಗೆ ಸಹಕಾರ ನೀಡಿದ ಸಚಿವರು, ಶಾಸಕರು ಹಾಗೂ ಪಕ್ಷದ ನಾಯಕರಿಗೆ ಧನ್ಯವಾದಗಳು,” ಎಂದು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.