LIVE | ಸಿದ್ದರಾಮಯ್ಯ ಬದಲಾವಣೆ ಚರ್ಚೆಯಿಲ್ಲ ಎಂದು ಖರ್ಗೆ ಖಡಕ್ ಸಂದೇಶ! ಇದರ ಮರ್ಮವೇನು?

30 April 2026 7:10 PM IST

ಕರ್ನಾಟಕ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿರುವ ನಾಯಕತ್ವ ಬದಲಾವಣೆ ಚರ್ಚೆಗಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಖಡಕ್ ಉತ್ತರ ನೀಡಿದ್ದಾರೆ. "ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಬದಲಾವಣೆಯ ಯಾವುದೇ ಪ್ರಸ್ತಾಪವಿಲ್ಲ" ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಅವರ ನಾಯಕತ್ವಕ್ಕೆ ಹೈಕಮಾಂಡ್ ಬೆಂಬಲವಿದೆ ಎಂಬ ಸಂದೇಶ ರವಾನಿಸಿದ್ದಾರೆ. ನಾಯಕತ್ವ ಬದಲಾವಣೆ ಕುರಿತ ಗೊಂದಲಗಳ ನಡುವೆ ಇದೇ ಮೊದಲ ಬಾರಿಗೆ ಖರ್ಗೆ ಅವರು ಬಹಿರಂಗವಾಗಿ ಪ್ರತಿಕ್ರಿಯಿಸಿರುವುದು ರಾಜ್ಯ ರಾಜಕೀಯದಲ್ಲಿ ಭಾರಿ ಮಹತ್ವ ಪಡೆದುಕೊಂಡಿದೆ. ಖರ್ಗೆ ಅವರ ಈ ಹೇಳಿಕೆಯ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು? ಅಸಮಾಧಾನಿತ ನಾಯಕರಿಗೆ ಹೈಕಮಾಂಡ್ ನೀಡಿದ ಸಂದೇಶವೇನು? ಈ ಕುರಿತಾದ ಲೈವ್ ವಿಶ್ಲೇಷಣೆ ಇಲ್ಲಿದೆ.