ಕೇರಳದಲ್ಲಿ ಹೊಸ ಕನ್ನಡ ಅಭಿವೃದ್ಧಿ ಪ್ರಾಧಿಕಾರ? ಮಂಜೇಶ್ವರದಲ್ಲಿ ಕನ್ನಡದ ಉಳಿವಿಗಾಗಿ ಹೊಸ ಕನಸು ಕಂಡ ಶಾಸಕ ಅಶ್ರಫ್!

23 May 2026 6:12 PM IST

ಕೇರಳದ ಗಡಿಭಾಗವಾದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭೆ ಕ್ಷೇತ್ರದ ಶಾಸಕ ಎ.ಕೆ.ಎಂ. ಅಶ್ರಫ್ ಅವರು ಕೇರಳ ವಿಧಾನಸಭೆಯ ಅಧಿವೇಶನದಲ್ಲಿ ಕನ್ನಡ ಭಾಷೆಯಲ್ಲೇ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಇಡೀ ದೇಶದ ಗಮನ ಸೆಳೆದಿದ್ದಾರೆ. ಮಂಜೇಶ್ವರ ಕ್ಷೇತ್ರವು ಭೌಗೋಳಿಕವಾಗಿ ಕೇರಳ ರಾಜ್ಯಕ್ಕೆ ಸೇರಿದ್ದರೂ, ಇಲ್ಲಿ ಕನ್ನಡಿಗರು ಮತ್ತು ಕನ್ನಡ ಭಾಷಿಗರು ಭಾರಿ ಸಂಖ್ಯೆಯಲ್ಲಿದ್ದಾರೆ. ಆಡಳಿತ ಮತ್ತು ಶೈಕ್ಷಣಿಕ ವ್ಯವಸ್ಥೆಯಲ್ಲಿ ಗಡಿನಾಡ ಕನ್ನಡಿಗರು ಎದುರಿಸುತ್ತಿರುವ ತಾರತಮ್ಯ ಹಾಗೂ ಸಮಸ್ಯೆಗಳಿಗೆ ಮುಕ್ತಿ ಹಾಡಲು ಶಾಸಕ ಅಶ್ರಫ್ ಅವರು ಕೇರಳ ಸರ್ಕಾರದಲ್ಲಿ 'ಹೊಸ ಕನ್ನಡ ಅಭಿವೃದ್ಧಿ ಪ್ರಾಧಿಕಾರ'ದ ಕನಸನ್ನು ಕಂಡಿದ್ದಾರೆ. ಮಂಜೇಶ್ವರ ಕ್ಷೇತ್ರದ ಜ್ವಲಂತ ಕನ್ನಡ ಸಮಸ್ಯೆಗಳು, ಕೇರಳದಲ್ಲಿ ಕನ್ನಡ ಭಾಷೆಯ ಉಳಿವು ಮತ್ತು ಅಭಿವೃದ್ಧಿ ಹಾಗೂ ಗಡಿನಾಡ ಕನ್ನಡಿಗರಿಗೆ ಸಿಗಬೇಕಾದ ಸಾಂವಿಧಾನಿಕ ಹಕ್ಕುಗಳ ಕುರಿತು ಶಾಸಕ ಎ.ಕೆ.ಎಂ. ಅಶ್ರಫ್ ಅವರು ನಮ್ಮ ವಿಶೇಷ ಕಾರ್ಯಕ್ರಮದಲ್ಲಿ ವಿಸ್ತಾರವಾಗಿ ಮಾತನಾಡಿದ್ದಾರೆ.