LIVE | ಕೋಗಿಲು ಒತ್ತುವರಿ ತೆರವು: ಸರ್ಕಾರದ ವಿರುದ್ಧ ಬಿಜೆಪಿ ಸತ್ಯಶೋಧನಾ ಸಮಿತಿ ವಾಗ್ದಾಳಿ!

12 Jan 2026 2:54 PM IST

ಬೆಂಗಳೂರಿನ ಕೋಗಿಲು ಲೇಔಟ್ ಒತ್ತುವರಿ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ಈ ಪ್ರಕರಣದ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ವರದಿ ಸಲ್ಲಿಸಲು ಶಾಸಕ ಎಸ್.ಆರ್. ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಬಿಜೆಪಿ ಸತ್ಯಶೋಧನಾ ಸಮಿತಿಯು ಇಂದು ತನ್ನ ವರದಿಯನ್ನು ಅಂತಿಮಗೊಳಿಸಿದೆ. ಇಂದು ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ, ಸಮಿತಿಯ ಅಧ್ಯಕ್ಷರಾದ ಎಸ್.ಆರ್. ವಿಶ್ವನಾಥ್ ಅವರು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರಿಗೆ ಅಧಿಕೃತವಾಗಿ ವರದಿಯನ್ನು ಹಸ್ತಾಂತರಿಸಿದರು. ವರದಿ ಸಲ್ಲಿಕೆಯ ನಂತರ ನಡೆದ ಮಹತ್ವದ ಪತ್ರಿಕಾಗೋಷ್ಠಿಯಲ್ಲಿ, ಒತ್ತುವರಿ ತೆರವು ಪ್ರಕ್ರಿಯೆಯಲ್ಲಿ ಸರ್ಕಾರದ ವೈಫಲ್ಯ ಮತ್ತು ಸಂತ್ರಸ್ತರಿಗೆ ಆಗಿರುವ ಅನ್ಯಾಯದ ಬಗ್ಗೆ ಸಮಿತಿಯು ಗಂಭೀರ ಆರೋಪಗಳನ್ನು ಮಾಡಿದೆ.