ಮನೆ ಮನೆಗೆ ಬರಲಿದ್ದಾರೆ ಅಧಿಕಾರಿಗಳು! SIR ಬಗ್ಗೆ ಇರುವ ಅನುಮಾನ ಹಾಗೂ ಆರೋಪಗಳಿಗೆ ಉತ್ತರಿಸಿದ V. ಅನ್ಬುಕುಮಾರ್

15 May 2026 8:27 PM IST

ಭಾರಿ ಚರ್ಚೆಗೆ ಗ್ರಾಸವಾಗಿರುವ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (SIR - Special Summary Revision) ಈಗ ನಮ್ಮ ಕರ್ನಾಟಕದಲ್ಲೂ ನಡೆಯಲಿದೆ. 30-06-2026 ರಿಂದ 29-07-2026 ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು (BLOs) ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಎಸ್ ಐಆರ್ (SIR) ಕುರಿತು ಸಾರ್ವಜನಿಕರಲ್ಲಿರುವ ಅನುಮಾನಗಳು, ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್ ಆಗುವ ಆತಂಕ ಮತ್ತು ಕೇಳಿಬರುತ್ತಿರುವ ಆರೋಪಗಳ ಕುರಿತು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು 'ದ ಫೆಡರಲ್ ಕರ್ನಾಟಕ'ದ (The Federal Karnataka) ಜೊತೆ ವಿಶೇಷವಾಗಿ ಮಾತನಾಡಿದ್ದಾರೆ. "ಕರ್ನಾಟಕದಲ್ಲಿ 59,050 ಮತಗಟ್ಟೆ ಮಟ್ಟದ ಅಧಿಕಾರಿಗಳು ಎಸ್ ಐಆರ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಯಾವುದೇ ಕಾರಣಕ್ಕೂ ಅರ್ಹ ಮತದಾರರ ಹೆಸರು ಡಿಲೀಟ್ ಆಗುವುದಿಲ್ಲ, ಈ ಬಗ್ಗೆ ಆತಂಕ ಬೇಡ" ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.