ಯುಎಇ ನಲ್ಲಿ ಪುರುಷ ನರ್ಸ್ ಉದ್ಯೋವಕಾಶ: ಅರ್ಜಿ ಆಹ್ವಾನ
ಬಿಎಸ್ಸಿ ನರ್ಸಿಂಗ್, ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಇರುವರಿಗೆ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ಉದ್ಯೋಗ ಅವಕಾಶ ಒದಗಿಸಲಿದೆ.
ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಯುನೈಟೆಡ್ ಅರಬ್ ಎಮಿರೈಟ್ಸ್ (ಯುಎಇ)ನಲ್ಲಿ ಪುರುಷ ನರ್ಸ್ಗಳಿಗೆ ಉದ್ಯೋಗ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಬಿಎಸ್ಸಿ ನರ್ಸಿಂಗ್, ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಇರುವರಿಗೆ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ಅರ್ಹರಿಗೆ ಈ ಉದ್ಯೋಗ ಅವಕಾಶವನ್ನು ಒದಗಿಸಲಿದೆ.
ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ದಿ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಈ ಹಿಂದೆ ಸ್ಲೋವಾಕಿಯಾದಲ್ಲಿ ಹಲವಾರು ಕನ್ನಡಿಗರಿಗೆ ನಿಗಮದ ಮೂಲಕ ಉದ್ಯೋಗ ದೊರಕಿಸಿಕೊಡುವಲ್ಲಿ ಯಶಸ್ವಿಯಾಗಿದ್ದರು. ಇದರ ಬೆನಲ್ಲೇ ಯುಎಈ ನಲ್ಲಿ ಪುರುಷ ನರ್ಸ್ಗಳಿಗೆ ಉದ್ಯೋಗ ನೀಡುವ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಹಾಗೆಯೇ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತ ನಾಯಕ್ ಅವರು ಈ ಯೋಜನೆಗೆ ವಿಶೇಷ ಆಸಕ್ತಿ ವಹಿಸಿದ್ದಾರೆ.
ಯುಎಈ ನಲ್ಲಿ ಪುರುಷ ನರ್ಸಿಂಗ್ ಹುದ್ದೆ ಬಯಸುವವರು 40 ವರ್ಷದೊಳಗಿನವರಾಗಿರಬೇಕು. 2 ವರ್ಷ ಅನುಭವ ಹೊಂದಿರಲೇಬೇಕು. ಆಯ್ಕೆಯಾಗುವವರಿಗೆ 5 ಸಾವಿರ ಎಇಡಿ(ಮಾಸಿಕ 1,11,000. ರೂ ವೇತನ), 30 ದಿನ ವೇತನ ರಹಿತ ಸಂಬಳ, ಕಂಪನಿ ವತಿಯಿಂದಲೇ ವೈದ್ಯಕೀಯ ವಿಮೆ, ಸಾರಿಗೆ ಮತ್ತು ವಿಮಾನಯಾನ ಟಿಕೆಟ್, ಆಹಾರ ಸೌಲಭ್ಯ, ವೀಸಾ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ನೀಡಲಾಗುತ್ತದೆ.
ಇದು ಸಂಪೂರ್ಣವಾಗಿ ಉಚಿತವಾಗಿದ್ದು, ಆಗಸ್ಟ್ ತಿಂಗಳಿನಲ್ಲಿ ಆನ್‌ಲೈನ್ ಮೂಲಕ ಸಂದರ್ಶನ ನಡೆಯಲಿದೆ. ಸಂದರ್ಶನದ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ಕೌಶಲ್ಯಾಭಿವೃದ್ದಿ ನಿಗಮ ತಿಳಿಸಿದೆ.
ಕೆಎಸ್‌ಡಿಸಿ ಈ ಹಿಂದೆ ಸ್ಲೋವಾಕಿಯಾದಲ್ಲಿ ಐಟಿ, ಡಿಪ್ಲೊಮಾ, ಐಟಿಐ ಮತ್ತು ಇತರ ಉದ್ಯೋಗ-ಆಧಾರಿತ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಹಲವಾರು ಯುವಕರಿಗೆ ಉದ್ಯೋಗಗಳನ್ನು ಒದಗಿಸಿದೆ. ಕೆಎಸ್‌ಡಿಸಿ ಹಂಗೇರಿಯಲ್ಲಿ 37 ಡ್ರೈವರ್‌ಗಳಿಗೆ ಉದ್ಯೋಗಗಳನ್ನು ಒದಗಿಸಿತ್ತು. ಜೊತೆಗೆ ವೆಲ್ಡರ್‌ಗಳಿಗೆ ಮಾರಿಷಸ್‌ನಲ್ಲಿ ಉದ್ಯೋಗಗಳನ್ನು ಪಡೆಯಲು ಸಹಾಯ ಮಾಡುತ್ತದೆ.
ಹೆಚ್ಚಿನ ವಿವರಗಳಿಗೆ ಅಭ್ಯರ್ಥಿಗಳು ಕೆಎಸ್‌ಡಿಸಿ ವೆಬ್ಸೈಟ್ http://imck.kaushalkar.com ಭೇಟಿ ನೀಡಬಹುದು ಮತ್ತು [email protected]ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ಈ ವಾಟ್ಸಪ್ಪ್ ನಂಬರುಗಳ 9606492213/ 9606492214 ಮೂಲಕ ವಿವರಗಳನ್ನು ಪಡೆಯಬಹುದು ಹಾಗೂ ಇಂಟರ್ನ್ಯಾಷನಲ್ ಮೈಗ್ರೇಶನ್ ಸೆಂಟರ್– ಕರ್ನಾಟಕ (IMC-K), ನಾಲ್ಕನೇ ಮಹಡಿ, ಕಲ್ಯಾಣ ಸುರಕ್ಷಾ ಭವನ, ಐಟಿಐ ಕಾಲೇಜು ಕ್ಯಾಂಪಸ್, ಡೇರಿ ಸರ್ಕಲ್, ಬನ್ನೇರುಘಟ್ಟ ಮುಖ್ಯ ರಸ್ತೆ, ಬೆಂಗಳೂರು–560029 ಈ ವಿಳಾಸಕ್ಕೆ ಭೇಟಿ ನೀಡಬಹುದು.