ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಇನ್ನೆರಡು ದಿನ ಸಾಧಾರಣ  ಮಳೆ
x

ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಇನ್ನೆರಡು ದಿನ ಸಾಧಾರಣ ಮಳೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 15 ಮತ್ತು 16ರಂದು ಸಾಧಾರಣ ಮಳೆ ಹಾಗೂ 30–40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


Click the Play button to hear this message in audio format

ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ 15 ಮತ್ತು 16ರಂದು ಸಾಧಾರಣ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರುದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿನ ನಗರ ಮತ್ತು ಗ್ರಾಮಾಂತರ ಸೇರಿದಂತೆ ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದ್ದು, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಬಲವಾದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೂ, ಜುಲೈ 15ರವರೆಗೆ ಬಿಸಿ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜುಲೈ 16ರಿಂದ ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ನಿರೀಕ್ಷೆಯೂ ಇದೆ.

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಬಿರುಗಾಳಿ ಬೀಸುವ ಸಾಧ್ಯತೆ ಇರುವ ಪ್ರದೇಶಗಳ ಜನರು ಮುನ್ನೆಚ್ಚರಿಕೆ ವಹಿಸುವಂತೆ ಹಾಗೂ ರೈತರು ಮತ್ತು ಸಾರ್ವಜನಿಕರು ಸ್ಥಳೀಯ ಹವಾಮಾನ ಮಾಹಿತಿ ಗಮನಿಸಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

Read More
Next Story